Www.cnewstv.in / 10.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಯುವನಿಧಿ : ಅದ್ದೂರಿ ಕಾರ್ಯಕ್ರಮಕ್ಕೆ ಕ್ಷಣಗಣನೆ..
ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ 5ನೇ ಗ್ಯಾರಂಟಿ ಯೋಜನೆ “ಯುವನಿಧಿ” ಅರ್ಹ ಫಲಾನುಭವಿಗಳಿಗೆ ನಗದು ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಉಳಿದಿದ್ದು ಫ್ರೀಡಂ ಪಾರ್ಕಿನಲ್ಲಿ ಅದ್ದೂರಿ ವೇದಿಕೆ ಸಜ್ಜಾಗಿದೆ.
ಸ್ವಾಮಿ ವಿವೇಕಾನಂದರ ಜನ್ಮದಿನದಂದು ಈ ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಶಿವಮೊಗ್ಗ ,ದಾವಣಗೆರೆ, ಚಿತ್ರದುರ್ಗಾ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಹಾಗೂ ಅಷ್ಟೆ ಸಂಖ್ಯೆಯ ಜನರುಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.
ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿಯ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರುಗಳಾದ ಮಧುಬಂಗಾರಪ್ಪ, ಡಾ.ಶರಣ ಪ್ರಕಾಶ್ ಪಾಟೀಲ್, ಡಾ.ಎಂ.ಸಿ. ಸುಧಾಕರ್ ಸೇರಿದಂತೆ ಹಲವು ಸಚಿವರು, ಗಣ್ಯರು, ಶಾಸಕರು ಅಧಿಕಾರಿಗಳು ಚಾಲನೆ ಕೊಡಲಿದ್ದಾರೆ.
ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ರಸ್ತೆ ಸಾರಿಗೆ ನಿಗಮ ಮತ್ತ ಖಾಸಗಿ ಒಡೆತನದ ಬಸ್ ಹಾಗೂ ಇತರೆ ವಾಹನಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಯುವನಿಧಿ ಯೋಜನೆಯ ವಿದ್ಯಾವಂತ ನಿರುದ್ಯೋಗಿ ಫಲಾನುಭವಿಗಳಲ್ಲದೇ, ಅಂತಿಮ ವರ್ಷಗಳ ಸೆಮಿಸ್ಟರ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೋಮಾ, ಪದವಿ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ವ್ಯವಸ್ಥಿತ ಆಯೋಜನೆಗಾಗಿ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗಿದೆ.
#Freedompark #Yuvanidhi #DKShivakumar #Sidaramayya #Shivamogga #Congress
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ.
C News TV Kannada News Online in cnewstv