Www.cnewstv.in / 20.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನನ್ನ ಹೆಸರನ್ನ ಎಐಸಿಸಿಗೆ ಕಳುಹಿಸಿ ಕೊಟ್ಟಿದ್ದಾರೆ – ಎಸ್ ಪಿ ದಿನೇಶ್.
ಆಯನೂರು ಮಂಜುನಾಥ್ ರವರಿಗೆ ಕಮಿಟ್ ಆಗಿ ಪಕ್ಷಕ್ಕೆ ಸೇರಿಸಿಕೊಂಡಿಲ್ಲ.
ಶಿವಮೊಗ್ಗ : ಈ ಬಾರಿ ನೈರುತ್ಯ ಪದವೀಧರ ಕ್ಷೇತ್ರದ 5 ಅಭ್ಯರ್ಥಿಯ ಹೆಸರನ್ನು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದೆ ಆದರೆ ನನ್ನ ಹೆಸರನ್ನು ಎಐಸಿಸಿಗೆ ಕಳುಹಿಸಲಾಗಿದೆ ಎಂದು ನೈರುತ್ಯ ಪದವೀಧರ ಕ್ಷೇತ್ರದ ಆಕಾಂಕ್ಷಿ ಅಭ್ಯರ್ಥಿ ಎಸ್ ಪಿ ದಿನೇಶ್ ಹೇಳಿದರು.
ಈ ಕ್ಷೇತ್ರಕ್ಕೆ ನನ್ನ ಜೊತೆಯಲ್ಲಿ ಬಿಜೆಪಿಯಿಂದ ಜೆಡಿಎಸ್ ಗೆ, ಜೆಡಿಎಸ್ ಇಂದ ಕಾಂಗ್ರೆಸ್ಸಿಗೆ ಬಂದಂತಹ ಆಯೂರು ಮಂಜುನಾಥ್ ರವರು ಅರ್ಜಿಯನ್ನ ಹಾಕಿದ್ದಾರೆ. ಹಾಗಾಗಿ ಈ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಗಾಗಿ ಎಸಿಸಿಗೆ ನಮ್ಮಿಬ್ಬರ ಹೆಸರನ್ನ ಶಿಫಾರಸು ಮಾಡಲಾಗಿದೆ. ಅಂತಿಮ ತೀರ್ಮಾನವನ್ನು ಎಐಸಿಸಿ ತೆಗೆದುಕೊಳ್ಳುವಂತೆ ಡಿಕೆ ಶಿವಕುಮಾರ್ ಅವರು ಪತ್ರವನ್ನು ಕಳುಹಿಸಿದ್ದಾರೆ.
ಕಳೆದ ಜೂನ್ ತಿಂಗಳಿನಿಂದ ಈ ಕ್ಷೇತ್ರದ ವ್ಯಾಪ್ತಿಯಲ್ಲಿ ನೋಂದಣಿ ಪ್ರಕ್ರಿಯೆಯಿಂದ ಹಿಡಿದು, ಚುನಾವಣಾ ತಯಾರಿಗೆ ಸಂಬಂಧಪಟ್ಟಂತೆ ಎರಡು ಮೂರು ಬಾರಿ ಪ್ರವಾಸ ಮಾಡಿದ್ದೇನೆ. ಈ ಬಾರಿ ನೋಂದಣಿ ಆದಂತಹ ಎಲ್ಲ ಮತದಾರರನ್ನ ಒಮ್ಮೆ ಸಂಪರ್ಕಿಸುವ ಕೆಲಸ ಮಾಡಿದ್ದೇನೆ.
2006 ರಿಂದ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣಾ ತಯಾರಿಯನ್ನು ಮಾಡಿಕೊಂಡು ಬಂದಿದ್ದೇನೆ. NSUI, ಯೂಥ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್, ರಾಜ್ಯ ಕಾಂಗ್ರೆಸ್ ನಲ್ಲಿ ವಿವಿಧ ವಿಭಾಗದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಎರಡು ಬಾರಿ ಚುನಾವಣೆಯಲ್ಲಿ ಸೋತರೂ ಕೂಡ ಪಕ್ಷದಿಂದ ಬೇರೆ ಪಕ್ಷಕ್ಕೆ ಹೋಗುವ ಯೋಚನೆಯನ್ನು ಮಾಡಿಲ್ಲ. ಪಕ್ಷ ಮೂಲ ಕಾಂಗ್ರೆಸ್ಸಿಗರಿಗೆ ಯಾವತ್ತು ಕೈ ಬಿಡುವುದಿಲ್ಲ. ಈ ಬಾರಿ ನನಗೆ ಟಿಕೆಟ್ ನೀಡುತ್ತದೆ ಎಂಬ ವಿಶ್ವಾಸವಿದೆ ಎಂದರು.
ಆಯನೂರು ಮಂಜುನಾಥ್ ರವರಿಗೆ ಕಮಿಟ್ ಆಗಿ ಪಕ್ಷಕ್ಕೆ ಸೇರಿಸಿಕೊಂಡಿಲ್ಲ..
ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಸರನ್ನು ಅಧಿಕೃತವಾಗಿ ಇನ್ನೂ ಕೂಡ ಪ್ರಕಟ ಮಾಡಿಲ್ಲ. ಆಯನೂರು ಮಂಜುನಾಥ್ ರವರಿಗೆ ಕಮಿಟ್ ಆಗಿ ಪಕ್ಷಕ್ಕೆ ಸೇರಿಸಿಕೊಂಡಿಲ್ಲ. ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಮಧು ಬಂಗಾರಪ್ಪನವರೇ ಈ ಕುರಿತು ಸ್ಪಷ್ಟನೆಯನ್ನ ನೀಡಿದ್ದಾರೆ, ಪಕ್ಷಕ್ಕೆ ಯಾರೇ ಬಂದರೂ ಸೇರಿಸಿಕೊಳ್ಳುವ ಪಕ್ಷದ ತೀರ್ಮಾನದಂತೆ ಅವರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ಆ ಅಭ್ಯರ್ಥಿಯನ್ನ ಗೆಲ್ಲಿಸುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ.
#Election2024 #TeachersandGraduatesConstituencies #SPDinesh #Congress #BJP
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ..
C News TV Kannada News Online in cnewstv