ಎಲ್ಲರ ಕುತೂಹಲಕ್ಕೆ ಕಾರಣವಾಗಿದ್ದ ಸಮ್ಮಿಶ್ರ ಪಕ್ಷದ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಇದೀಗ ತೆರೆ ಬಿದ್ದಿದೆ.ಮಾಜಿ ಶಾಸಕ ಮಧು ಬಂಗಾರಪ್ಪ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ದೂರವಾಣಿ ಮೂಲಕ ಮಧು ಬಂಗಾರಪ್ಪ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿ ಕಣಕ್ಕಿಳಿಯಲು ಮನವೊಲಿಸಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ವಿದೇಶ ಪ್ರವಾಸದಲ್ಲಿರುವ ಮಧು ಬಂಗಾರಪ್ಪನವರು ಇಂದು ರಾತ್ರಿ ವಾಪಸ್ಸಾಗಿ ಜೆಡಿಎಸ್ ನಾಯಕರ ಜೊತೆ ಭೇಟಿ ಮಾಡಿ ನಂತರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ ಬಿಜೆಪಿಯಿಂದ ಬಿಎಸ್ ವೈ ಪುತ್ರ ಬಿವೈ ರಾಘವೇಂದ್ರ ಅವರು ಕಣಕ್ಕಿಳಿದು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಒಟ್ಟಿನಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯು ರಂಗೇರಿದ್ದು ಇಬ್ಬರಲ್ಲಿ ಯಾರಿಗೆ ವಿಜಯ ಮಾಲೆ ಒಲಿಯಲಿದೆ ಎಂಬುದನ್ನು ಕಾದು ನೋಡಬೇಕು ..
C News TV Kannada News Online in cnewstv