Cnewstv / 07.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ: ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ, ದಾವಣಗೆರೆ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಬಂಜಾರ ಅಭಿವೃದ್ಧಿ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ೨೮೫ನೇ ಜಯಂತ್ಯುತ್ಸವವನ್ನು ಫೆ. ೧೩ ರಿಂದ ೧೫ರವರೆಗೆ ಸೂರಗೊಂಡನಕೊಪ್ಪದಲ್ಲಿ(ಭಾಯ್ ಘÀಢ್) ನಡೆಯಲಿದೆ ಎಂದು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್ ಡಿ.ಆರ್. ತಿಳಿಸಿದರು.
ಅವರು ಇಂದು ಮೀಡಿಯಾ ಹೌಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೇವಾಲಾಲ್ ಮಹಾರಾಜರ ಜಯಂತ್ಯುತ್ಸವ ಸೂರಗೊಂಡನಕೊಪ್ಪದಲ್ಲಿ ಅತ್ಯಂತ ವಿಜೃಂಭಣೆಯಿAದ ನಡೆಯಲಿದೆ. ಮಹಾರಾಷ್ಟç ಸೇರಿದಂತೆ ವಿವಿಧ ರಾಜ್ಯಗಳಿಂದ ಸುಮಾರು ೨ ಲಕ್ಷಕ್ಕೂ ಹೆಚ್ಚು ಮಾಲಾಧಾರಿಗಳು ಬರುತ್ತಾರೆ. ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಫೆ. ೧೨ ಮತ್ತು ೧೩ ರಂದು ಕುಂಚೇನಹಳ್ಳಿ ಹಾಗೂ ಸವಳಂಗದಲ್ಲಿ ಮಾಲಾಧಾರಿಗಳಿಗಾಗಿ ಅನ್ನದಾಸೋಹ ಕೂಡ ಏರ್ಪಡಿಸಲಾಗಿದೆ ಎಂದರು.
ಫೆ. ೧೩ ರಂದು ಜಯಂತ್ಯುತ್ಸವಕ್ಕೆ ಚಾಲನೆ ನೀಡಲಾಗುವುದು. ಹಾಗೆಯೇ ಫೆ. ೧೪ ರಂದು ಮಧ್ಯಾಹ್ನ ೩ ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ. ಮಹಾದೇವಪ್ಪ, ಎಸ್.ಎಸ್. ಮಲ್ಲಿಕಾರ್ಜುನ, ಮಧು ಬಂಗಾರಪ್ಪ, ಸಂಸದರಾದ ಬಿ.ವೈ. ರಾಘವೇಂದ್ರ, ಜಿ.ಎಂ. ಸಿದ್ಧೇಶ್ ಸೇರಿದಂತೆ ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಯ ಶಾಸಕರು, ಗಣ್ಯರು ಆಗಮಿಸಲಿದ್ದಾರೆ. ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಸಭಾ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು ಜಯಂತ್ಯುತ್ಸವದ ನೇತೃತ್ವ ವಹಿಸಲಿದ್ದಾರೆ ಎಂದರು.
ಈ ಮೂರು ದಿನದ ಕಾರ್ಯಕ್ರಮದಲ್ಲಿ ಬಂಜಾರ ಕವಿಗೋಷ್ಠಿ, ಮಹಿಳಾ ಗೋಷ್ಠಿ, ಯುವ ಸಮಾವೇಶ ಮುಂತಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಮಾವೇಶದ ಮೂಲಕ ಸಮುದಾದಯದ ಜ್ವಲಂತ ಸಮಸ್ಯೆಗಳನ್ನು ಚರ್ಚಿಸಿ ಸರ್ಕಾರಕ್ಕೆ ಮನವಿ ಮಾಡಲಾಗುವುದು ಮತ್ತು ಸೇವಾಲಾಲ್ ಕ್ಷೇತ್ರದಲ್ಲಿ ವಲಸೆ ಮಕ್ಕಳಿಗಾಗಿ ವಸತಿ ಶಾಲೆಯೊಂದನ್ನು ತೆರೆಯಲು ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಉಷಾ ನಾಯ್ಕ್, ಉಮಾ ಮಹೇಶ್ವರ್ ನಾಯ್ಕ್, ನಾಗರಾಜ್ ನಾಯ್ಕ್ ಮೊದಲಾದವರಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ..
C News TV Kannada News Online in cnewstv