Breaking News

ದೆಹಲಿಯಲ್ಲಿ ದೊಡ್ಡ ಡ್ರಾಮಾವನ್ನೇ ಮಾಡುತ್ತಿದ್ದಾರೆ – ಕೆ ಎಸ್ ಈಶ್ವರಪ್ಪ.

Cnewstv / 07.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ದೆಹಲಿಯಲ್ಲಿ ದೊಡ್ಡ ಡ್ರಾಮಾವನ್ನೇ ಮಾಡುತ್ತಿದ್ದಾರೆ – ಕೆ ಎಸ್ ಈಶ್ವರಪ್ಪ.

ಶಿವಮೊಗ್ಗ : ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರೆಲ್ಲ ದೆಹಲಿಯಲ್ಲಿ ದೊಡ್ಡ ಡ್ರಾಮಾವನ್ನೇ ಮಾಡುತ್ತಿದ್ದಾರೆ ಎಂದು ಮಾಜಿ‌ ಉಪ ಮುಖ್ಯಮಮಂತ್ರಿ ಹಾಗೂ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ರಾಜ್ಯದ ಜನರ ಹಣವನ್ನು ತಮ್ಮ ಪ್ರವಾಸಕ್ಕಾಗಿ ಒಯ್ದು ದೆಹಲಿಯಲ್ಲಿ ಲೋಕಸಭಾ ಚುನಾವಣೆಯ ಪ್ರಚಾರ ಮಾಡುತ್ತಿದ್ದಾರೆ. ಇದು ಚುನಾವಣಾ ಪ್ರಚಾರವಲ್ಲದೇ ಮತ್ತೇನೂ ಅಲ್ಲ. ಇದಕ್ಕೆ ಅವರು ರಾಜ್ಯದ ಜನರ ತೆರೆಗೆ ಹಣವನ್ನೇ ಬಳಸಬೇಕಿತ್ತೇ ಎಂದು ಪ್ರಶ್ನಿಸಿದರು. ಕೇಂದ್ರದಿಂದ ಹಣ ಬಂದಿಲ್ಲ ಎಂದು ಕಾಂಗ್ರೆಸ್ ನವರು ಬೊಬ್ಬೆ ಹೊಡೆಯುತ್ತಿದ್ದಾರೆ.

ಈಗಾಗಲೇ ಕೇಂದ್ರ ಆರ್ಥಿಕ ಸಚಿವರು ಈ ಬಗ್ಗೆ ವಿವರಣೆ ನೀಡಿದ್ದಾರೆ. ಸಿದ್ಧರಾಮಯ್ಯ ಅವರು ಕೇಂದ್ರ ಹಣಕಾಸು ಸಭೆಗೆ ಹೋಗಲಿಲ್ಲ. ಹೋಗಿದ್ದರೆ ಕೇಳಬಹುದಿತ್ತು. ಕೇವಲ ಕೇಂದ್ರದಿAದ ಹಣ ಬಂದಿಲ್ಲ ಎಂದು ನೂರು ಸಲ ಸುಳ್ಳು ಹೇಳಿ ಅದನ್ನೇ ಸತ್ಯ ಮಾಡಲು ಹೊರಟಿದ್ದಾರೆ. ಹೀಗೆಲ್ಲಾ ಆರೋಪ ಮಾಡುವುದನ್ನು ಬಿಟ್ಟು ಯುಪಿಎ ಮತ್ತು ಎನ್.ಡಿ.ಎ. ಸರ್ಕಾರ ಇದ್ದಾಗ ಎಷ್ಟು ಹಣ ಬಂದಿತ್ತು ಎಂಬುದನ್ನು ತಿಳಿಸಲಿ. ಮತ್ತು ಇದಕ್ಕಾಗಿ ಶ್ವೇತ ಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು.

ಅಖಂಡ ಭಾರತ ಕಲ್ಪನೆ ಇರುವಾಗ ಕಾಂಗ್ರೆಸ್ ನ ಈ ಇಬ್ಬರು ರಾಷ್ಟçದ್ರೋಹದ ಹೇಳಿಕೆ ನೀಡಿದ್ದಾರೆ. ದಕ್ಷಿಣ ಭಾರತವನ್ನು ಪ್ರತ್ಯೇಕ ದೇಶವನ್ನಾಗಿ ನಾವು ಕೇಳುತ್ತೇವೆ ಎಂದು ಹೇಳುತ್ತಾರೆ. ಇದು ಎಂತಹ ಸಂಸ್ಕೃತಿ? ಒಂದು ಕಡೆ ಕಾಂಗ್ರೆಸ್ ಪಕ್ಷದ ನಾಯಕರು ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಯಾತ್ರೆ ಮಾಡಿ ಇದು ಅಖಂಡ ಭಾರತ ಎನ್ನುತ್ತಾರೆ. ಕರ್ನಾಟಕದ ಈ ಇಬ್ಬರು ದೇಶವನ್ನೇ ಭಾಗ ಮಾಡಲು ಹೊರಟಿದ್ದಾರೆ. ಇದು ಹೊಸತೇನಲ್ಲ. ಕಾಂಗ್ರೆಸ್ ಪಕ್ಷ ಸ್ವಾತಂತ್ರದ ಸಂದರ್ಭದಲ್ಲೇ ದೇಶವನ್ನು ಇಬ್ಭಾಗ ಮಾಡಿದೆ. ಇಂತಹ ವ್ಯಕ್ತಿಗಳನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಧೈರ್ಯವಿದ್ದರೆ ಪಕ್ಷದಿಂದ ಉಚ್ಛಾಟಿಸಬೇಕು ಎಂದರು.

#KSEshwarappa #Stategovernment #Sidaramayya #DKShivakumar #Shivamogga #Modhi #PM #MP #MPElection2024 #Election

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು ಒದಿ..

Leave a Reply

Your email address will not be published. Required fields are marked *

*