Cnewstv / 21.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಇನ್ನು ಮುಂದೆ ಶಾಲಾ ಮಕ್ಕಳಿಗೆ ದೊರೆಯಲಿದೆ ರಾಗಿ ಮಾಲ್ಟ್..
ಶಿವಮೊಗ್ಗ : ಶಾಲಾ ಮಕ್ಕಳನ್ನು ಶಾಲೆಯತ್ತಾ ಸೆಳೆಯಲು ಹಾಗೂ ಮಕ್ಕಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಮಕ್ಕಳಿಗಾಗಿಯೇ ಹೊಸ ಯೋಜನೆಯೊಂದನ್ನು ಜಾರಿ ಮಾಡಿದೆ.
ಹೌದು ಇನ್ನು ಮುಂದೆ ವಾರದಲ್ಲಿ ಮೂರು ದಿನ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈಗಾಗಲೇ ವಾರದಲ್ಲಿ ಐದು ದಿನ ನೀಡುತ್ತಿರುವ ಹಾಲು ಮತ್ತು ವಾರದಲ್ಲಿ ಎರಡು ದಿನ ಮೊಟ್ಟೆ ಸೇರಿದಂತೆ ಇನ್ನು ಮುಂದೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ಕೂಡ ನೀಡಲಾಗುವುದು.
ರಾಜ್ಯ ಸರ್ಕಾರವು ಸರಿಸುಮಾರು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
#Shivamogga #Madhubangarappa #Schoolstudent #Congress #Stategovernment #Raggimalt
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ..
Recent Comments