Cnewstv / 22.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕರಾಮುವಿಯಿಂದ ಪಿಯು-ಸಿಇಟಿ/ನೀಟ್ ಪರೀಕ್ಷೆಗಳಿಗೆ ತರಬೇತಿಗಾಗಿ ಅರ್ಜಿ ಆಹ್ವಾನ.
ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮೈಸೂರಿನ ವಿಜಯವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ಆಯೋಜಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಫೆ. 27 ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಕರಾಮುವಿ ಕುಲಸಚಿವ ಪ್ರೊ. ಕೆ.ಎಲ್.ಎನ್ ಮೂರ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವುದು .
#Job #Bangalore #Statelevel #Shivamogga #jobvacancy #Wanted #PUC #Neet #Examentry
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ.
C News TV Kannada News Online in cnewstv