Breaking News

ಮಧುಬಂಗಾರಪ್ಪ ನಾಳೆ ನಾಮಪತ್ರ ಸಲ್ಲಿಕೆ

ಶಿವಮೊಗ್ಗ ಲೋಕಸಭಾ ಉಪಚುನಾವಣೆ ಈ ಬಾರಿ ಪ್ರತಿಷ್ಠೆಯಾಗಿದೆ. ಜೆಡಿಎಸ್-ಕಾಂಗ್ರೆಸ್ ಸಮಿಶ್ರ ಪಕ್ಷದ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ನಾಳೆ ನಾಮಪತ್ರ ಸಲ್ಲಿಸಲ್ಲಿದ್ದಾರೆ. ಮುಖ್ಯಮಂತ್ರಿ ಕುಮಾರ ಸ್ವಾಮಿಯವರು ಬೆಳಿಗ್ಗೆ 10-45 ಕ್ಕೆ‌ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೆಲಿಕಾಪ್ಟರ್ ಮೂಲಕ ಬಂದು, ನಗರದ ನೆಹರೂ ಕ್ರೀಡಾಂಗಣದಲ್ಲಿ ಅಯೋಜಿಸಲಾಗಿರುವ ಬಹಿರಂಗ ಸಭೆಗೆ ಹಾಜರಾಗಲಿದ್ದಾರೆ. ನಂತರ ಮುಖ್ಯಮಂತ್ರಿ ಕುಮಾರ ಸ್ವಾಮಿ ಹಾಗು‌ ಮಧು ಬಂಗಾರಪ್ಪನವರು ನಗರದ ರವೀಂದ್ರ ನಗರ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಛೇರಿ ತಲುಪಿ ನಾಮಪತ್ರ ಸಲ್ಲಿಸಲಿದ್ದಾರೆ.
ಕಾಯ ಕ್ರಮದಲ್ಲಿ ಸಮಿಶ್ರ ಪಕ್ಷದ ಸಚಿವ ದೇಶಪಾಂಡೆ,
ಕಾಗೋಡು ತಿಮ್ಮಪ್ಪ, ಸಚಿವೆ ಜಯಮಾಲ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಶಾಸಕ ಪ್ರಸನ್ನ ಕುಮಾರ್ , ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಎಂ.ಶ್ರೀಕಾಂತ್ ಉಪಸ್ದಿತರಿದ್ದಾರೆ..

Leave a Reply

Your email address will not be published. Required fields are marked *

*