Breaking News

ರಾಮೇಶ್ವರಂ ಬ್ಲಾಸ್ಟ್ ಪ್ರಕರಣ : ಸತತ ನಾಲ್ಕು ಗಂಟೆಯಿಂದ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳಿಂದ ದಾಳಿ.

Cnewstv / 27.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಾಮೇಶ್ವರಂ ಬ್ಲಾಸ್ಟ್ ಪ್ರಕರಣ : ಸತತ ನಾಲ್ಕು ಗಂಟೆಯಿಂದ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳಿಂದ ದಾಳಿ.

ಶಿವಮೊಗ್ಗ : ಬೆಂಗಳೂರು ರಾಮೇಶ್ವರಂ ಕೆಫೆ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳು ಸತತ ನಾಲ್ಕು ಗಂಟೆಗಳಿಂದ ದಾಳಿ ನಡೆಸಿ ವಿಚಾರಣೆ ಮಾಡುತ್ತಿದ್ದಾರೆ.

ಸೊಪ್ಪುಗುಡ್ಡೆ, ಇಂದಿರಾನಗರ ಸೇರಿದಂತೆ ತೀರ್ಥಹಳ್ಳಿ ಪಟ್ಟಣದ 5 ಕ್ಕೂ ಹೆಚ್ಚು ಕಡೆ ಎನ್‌ಐಎ ತಂಡದವರು ದಾಳಿ ನಡೆಸಿದ್ದಾರೆ. ನಿಷೇಧಿತ ಪಿ ಎಫ್ ಐ ಸಂಘಟನೆಯ ಇಮ್ರಾಜ್ ಶಾಫ್ ಅವರ ಡಿಜಿಟಲ್‌ ಜೋನ್ ಅಂಗಡಿ, ಶಿವಮೊಗ್ಗ ಟಯರ್ ಬ್ಲಾಸ್ಟ್ ಪ್ರಕರಣದ ಶಾರೀಕ್, ಮುನೀರ್, ಮತೀನ್ ಮನೆ ಮೇಲು ದಾಳಿ ನಡೆಸಿದ್ದಾರೆ.

ಶಂಕಿತ ವ್ಯಕ್ತಿಗಳ ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. ಬೆಂಗಳೂರಿನಿಂದ ಸುಮಾರು 5ಕ್ಕೂ ಹೆಚ್ಚು ವಾಹನಗಳಲ್ಲಿ 15ಕ್ಕೂ ಹೆಚ್ಚು ಅಧಿಕಾರಿಗಳು ಆಗಮಿಸಿದ್ದಾರೆ.‌ ಬ್ಲಾಸ್ ಪ್ರಚಾರಕ್ಕೆ ಸಂಬಂಧಿಸಿದಂತೆ ಕೆಲವರನ್ನ ವಶಕ್ಕೆ ಪಡೆಯುವ ಸಾಧ್ಯತೆ ಇದೆ..

#Blast #Shivamogga #Thirthali #RameshwaramCafeblast #Cafeblast

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು ಒದಿ..

Leave a Reply

Your email address will not be published. Required fields are marked *

*