Cnewstv / 16.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದ ಎಲ್ಲಾ ವರ್ಗಗಳ ಭವಿಷ್ಯದ ನಾಳೆಗಳನ್ನು ಗಮನದಲ್ಲಿರಿಸಿಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ.
ಶಿವಮೊಗ್ಗ : ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ತೀರ್ಥಹಳ್ಳಿ ಮಂಡಲ ಇಂದು ಪಟ್ಟಣದ ವಿದ್ಯಾದಿರಾಜ ಸಮುದಾಯ ಭವನದಲ್ಲಿ ಆಯೋಜಿಸಿದ್ದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಮತ್ತು ಪ್ರಮುಖ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಿ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ ಅವರೊಂದಿಗೆ ಸಭಾ ಕಾರ್ಯಕ್ರಮ ಉದ್ಘಾಟಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಲಾಯಿತು.
ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದ ಎಲ್ಲಾ ವರ್ಗಗಳ ಭವಿಷ್ಯದ ಉತ್ತಮ ನಾಳೆಗಳನ್ನು ಗಮನದಲ್ಲಿರಿಸಿಕೊಂಡು ಕಾರ್ಯರೂಪಕ್ಕೆ ತಂದಿರುವ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡು ಪ್ರತಿ ಬೂತ್ ಮಟ್ಟದಲ್ಲಿ ಪ್ರತಿ ಮನೆಯಲ್ಲಿ ಯೋಜನೆಗಳ ಫಲಾನುಭವಿಗಳಿದ್ದು ಅವರನ್ನು ಖುದ್ದಾಗಿ ಸಂಪರ್ಕಿಸಿ ಬಿಜೆಪಿಗೆ ಬೆಂಬಲಿಸುವ ಕಾರ್ಯ ನಡೆಯಬೇಕಿದೆ ಎಂದು ಆಗ್ರಹಪಡಿಸಲಾಯಿತು.
ಭಾರತ ವಿಶ್ವಗುರು ಸ್ಥಾನವನ್ನು ಅಲಂಕರಿಸುವ ಜೊತೆಗೆ ಎಲ್ಲಾ ವಲಯಗಳ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡಿ ಬಲಿಷ್ಠ ಭಾರತ ನಿರ್ಮಾಣ ಮಾಡಲು ಹಾಗೂ ವಿಶ್ವದ ಮೂರನೇ ಆರ್ಥಿಕ ರಾಷ್ಟ್ರವಾಗಿಸಲು ಇಟ್ಟಿರುವ ದಿಟ್ಟ ಹೆಜ್ಜೆಯ ಪ್ರಗತಿಗೆ ಕೈಗೊಂಡಿರುವ ಐತಿಹಾಸಿಕ ಕ್ರಮಗಳ ಕುರಿತು ಮತ್ತು 2047ಕ್ಕೆ ವಿಕಸಿತ ಭಾರತ ನಿರ್ಮಿಸಲು ಕೈಗೊಂಡಿರುವ ಕ್ರಮಗಳ ಕುರಿತು ಹಾಗೂ ಚುನಾವಣಾ ಪ್ರಣಾಳಿಕೆ ಬಗ್ಗೆ ಸವಿಸ್ತಾರವಾಗಿ ಸಭೆಯ ಮುಂದೆ ತೆರೆದಿಟ್ಟು ಕಾರ್ಯಕರ್ತರಲ್ಲಿ ಉತ್ಸಾಹ ದುಪ್ಪಟ್ಟುಗೊಳಿಸುವ ಕೆಲಸ ಮಾಡಲಾಯಿತು.
ಹಾಗೆಯೇ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಮೂರು ಅವಧಿಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಜಾರಿಗೊಳಿಸಿರುವ ಅನೇಕ ಅಭಿವೃದ್ಧಿ ಯೋಜನೆಗಳ ಬಗ್ಗೆ ಹಾಗೂ ಕೇಂದ್ರ ಸರ್ಕಾರದ ಅನೇಕ ಜನಪರ ಯೋಜನೆಗಳು ನನ್ನ ಕ್ಷೇತ್ರದ ಮತದಾರ ಪ್ರಭುಗಳಿಗೆ ತಲುಪಿ ಜೀವನ ಮಟ್ಟ ಸುಧಾರಣೆಗೆ ಕೈಗೊಂಡಿರುವ ಪ್ರಾಮಾಣಿಕ ಪ್ರಯತ್ನದ ಚಿತ್ರಣವನ್ನು ಸಭೆಯ ಮುಂದೆ ತೆರೆದಿಟ್ಟು, ಅಭೂತಪೂರ್ವ ಗೆಲುವಿಗೆ ಕೈಜೋಡಿಸುವಂತೆ ಕರೆಕೊಡಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಅರುಣ್ ಅವರು, ಮಂಡಲ ಅಧ್ಯಕ್ಷರಾದ ನವೀನ್ ಹೆದ್ದೂರು ಅವರು, ಮಾಜಿ ಶಾಸಕರಾದ ಸ್ವಾಮಿ ರಾಯರು, ರಾಜ್ಯ ಪ್ರಕೋಷ್ಟ ಸಂಯೋಜಕರಾದ ದತ್ತಾತ್ರೇಯ ಅವರು, ಜೆಡಿಎಸ್ ಮುಖಂಡರಾದ ರಾಮಸ್ವಾಮಿಯವರು, ಮುಖಂಡರಾದ ಬಾಳೇಬೈಲು ರಾಘವೇಂದ್ರ ಅವರು, ರಕ್ಷಿತ್ ಮೇಗರವಳ್ಳಿ ಅವರು, ಸಾಲೆಕೊಪ್ಪ ರಾಮಚಂದ್ರ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ..
Recent Comments