Breaking News

ಮಾದರಿ ನೀತಿ ಸಂಹಿತೆ ಉಲ್ಲಂಘನೆ 189 ಪ್ರಕರಣಗಳು ದಾಖಲು..

Cnewstv / 26.04.2024 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ಮಾದರಿ ನೀತಿ ಸಂಹಿತೆ ಉಲ್ಲಂಘನೆ 189 ಪ್ರಕರಣಗಳು ದಾಖಲು..

ಬೆಂಗಳೂರು : ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ 189 ಪ್ರಕರಣಗಳು ದಾಖಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ತಿಳಿಸಿದೆ.‌

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಬುಧವಾರದ ಹೊರಗೆ 189 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 23 ಪ್ರಕರಣಗಳು ದೋಷಪೂರಿತ ಭಾಷಣ, 28 ಪ್ರಕರಣಗಳು ಮತದಾರರನ್ನು ಪ್ರಚೋದಿಸಲು ಯತ್ನಿಸಿದ ಆರೋಪದ ಅಡಿಯಲ್ಲಿ, 25 ಪ್ರಕರಣಗಳು ಧಾರ್ಮಿಕ ಸ್ಥಳಗಳ ದುರ್ಬಳಕೆ, 15 ಪ್ರಕರಣಗಳು ಮಕ್ಕಳನ್ನ ಪ್ರಚಾರ ಕಾರ್ಯದಲ್ಲಿ ಬಳಸಿಕೊಂಡಿರುವುದು ದಾಖಲಾಗಿದೆ.

ಪ್ರಮುಖ ಪಕ್ಷಗಳು ಸೇರಿದಂತೆ ಪ್ರತ್ಯೇಕ ಅಭ್ಯರ್ಥಿಗಳ ವಿರುದ್ಧವೂ ಕೂಡ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.

#2024election #MPElection #Bangalore #Electioncommition

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*