Cnewstv / 09.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಸಾಗರ : ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ..
ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಘಟನೆ ಇಂದು ಶಿವಮೊಗ್ಗ ಜಿಲ್ಲೆ ಸಾಗರ ಸಮೀಪ ನಡೆದಿದೆ.
ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ JRB ಹೆಸರಿನ ಖಾಸಗಿ ಬಸ್ಸು ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಕ್ರಾಸ್ ಬಳಿ ಪಲ್ಟಿಯಾಗಿದೆ. ಸುಮಾರು ಮೂವತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಯಾವುದೇ ಪ್ರಾಣ ಅಪಾಯವಾಗಿಲ್ಲ. ಗಾಯಾಳುಗಳನ್ನು ಅನಂತಪುರ ಮತ್ತು ಸಾಗರದ ಆಸ್ಪತ್ರೆಗಳಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಅನಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಇದನ್ನು ಒದಿ..
C News TV Kannada News Online in cnewstv