Breaking News

ಡೆಂಗ್ಯೂಗೆ ಆರೋಗ್ಯ ಇಲಾಖೆಯ ಸಿಬ್ಬಂದಿಯೇ‌ ಬಲಿ.

Cnewstv / 13.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ಡೆಂಗ್ಯೂಗೆ ಆರೋಗ್ಯ ಇಲಾಖೆಯ ಸಿಬ್ಬಂದಿಯೇ‌ ಬಲಿ.

ಶಿವಮೊಗ್ಗ : ಡೆಂಗ್ಯೂನಿಂದ ಆರೋಗ್ಯ ಇಲಾಖೆಯ ಸಿಬ್ಬಂದಿಯೇ‌ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

ರಾಜ್ಯದಲ್ಲಿ ಡೆಂಗ್ಯೂಗೆ ಇಂದು ಮತ್ತೊಂದು ಬಲಿಯಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಡೆಂಗ್ಯೂನಿಂದ‌ ಸಾವನ್ನಪ್ಪಿದ್ದಾರೆ.

ಸಾಗರ ತಾಲೂಕು ಆಸ್ಪತ್ರೆಯ ಡಯಾಲಿಸಿಸ್ ವಿಭಾಗದ ಸಿಬ್ಬಂದಿ ನಾಗರಾಜ್(35), ಕಳೆದ ಕೆಲ ದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದರು. ನಂತರ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ನಾಗರಾಜ್ ಮೃತಪಟ್ಟಿದ್ದಾರೆ. ಶುಗರ್ ನಿಂದಲೂ ಬಳಲುತ್ತಿದ್ದ ನಾಗರಾಜ್, 26 ಸಾವಿರಕ್ಕಿಂತ ಕಡಿಮೆ ಪ್ಲೇಟ್ ಲೆಟ್ ಸಂಖ್ಯೆ ಕುಸಿದಿ, ಹೀಗಾಗಿ ಇಂದು ಸಾವನ್ನಪ್ಪಿದ್ದಾರೆ..ಆರೋಗ್ಯ ಇಲಾಖೆ ಸಿಬ್ಬಂದಿ ನಾಗರಾಜ್ ಡೆಂಗ್ಯೂನಿಂದ ಮೃತಪಟ್ಟಿರುವುದಾಗಿ ಸಾಗರ ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಪ್ಪ ದೃಢಪಡಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ಇದನ್ನು ಒದಿ…

Leave a Reply

Your email address will not be published. Required fields are marked *

*