Cnewstv / 18.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ರಾಜ್ಯದಲ್ಲಿ ಅಸಮರ್ಥ ಸರ್ಕಾರ ಆಡಳಿತದಲ್ಲಿದೆ – ಬಿ ವೈ ವಿಜಯೇಂದ್ರ
ಶಿವಮೊಗ್ಗ : ರಾಜ್ಯದಲ್ಲಿ ಅಸಮರ್ಥ ಸರ್ಕಾರ ಆಡಳಿತದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ನಿನ್ನೆ ನಿಧನರಾದಂತಹ ಬಿಜೆಪಿಯ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ರವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ನಂತರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಅಸಮರ್ಥ ಸರ್ಕಾರ ಆಡಳಿತದಲ್ಲಿದೆ. ರಾಜ್ಯವನ್ನು ದಿವಾಳಿ ಅಂಚಿಗೆ ತೆಗೆದುಕೊಂಡು ಹೋಗುತ್ತಿದೆ ಎಂದು ಆರೋಪಿಸಿದ್ದರು.
ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಒಂದು ವರ್ಷದಲ್ಲಿ ಇವರ ಆಡಳಿತ ಆರ್ಥಿಕ ಸಂಕಷ್ಟಕ್ಕೆ ಸರ್ಕಾರ ಸಿಲುಕಿಕೊಂಡಿದೆ. ಬಿಜೆಪಿ ಸರ್ಕಾರ ಆಡಳಿತದಲ್ಲಿ ಇದ್ದಾಗ ಯಾವುದೇ ಸಮಸ್ಯೆ ಇರಲಿಲ್ಲ. ಮಾತು ಎತ್ತಿದರೆ ಕೇಂದ್ರ ಸರ್ಕಾರದ ಬಗ್ಗೆ ಮಾತನಾಡುತ್ತಾರೆ. ಇವರು ಕೇಂದ್ರ ಸರ್ಕಾರವನ್ನು ದೂರುವ ಚಾಲಿ ರೂಡಿಸಿಕೊಂಡಿದ್ದಾರೆ.
ಜನಸಾಮಾನ್ಯರ ಪಾಲಿಗೆ ಸರ್ಕಾರ ಸತ್ತು ಹೋಗಿದೆ ಒಂದು ಕಡೆ ಭ್ರಷ್ಟಾಚಾರ ಇನ್ನೊಂದು ಕಡೆ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಭ್ರಷ್ಟಾಚಾರದಲ್ಲಿ ಸರ್ಕಾರ ಮುಳುಗಿ ಹೋಗಿದೆ ಎಂದರು..
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಇದನ್ನು ಒದಿ…
Recent Comments