Cnewstv / 19.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಶಿವಮೊಗ್ಗಕ್ಕೆ ಬರುತ್ತಾ ವಂದೇ ಭಾರತ್ ರೈಲು ??
ಶಿವಮೊಗ್ಗ : ಶಿವಮೊಗ್ಗ ಡಿಸಿ ಕಚೇರಿಯಲ್ಲಿ ಸಂಸದ ಬಿ ವೈ ರಾಘವೇಂದ್ರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರೈಲ್ವೆ ಕಾಮಗಾರಿಗಳ ಪ್ರಗತಿ ಪರಿಶೀಲನ ಮಾಡಿದರು. ಶಿವಮೊಗ್ಗ ಶಿಕಾರಿಪುರ ರಾಣೇಬೆನ್ನೂರು ನೂತನ ರೈಲ್ವೆ ಮಾರ್ಗದ ಪ್ರಸಕ್ತ ಸ್ಥಿತಿಯ ಮಾಹಿತಿ ಪಡೆದರು.
ಆರ್ ಓ ಬಿ ಸೇರಿದಂತೆ ಜಿಲ್ಲೆಯ ಮೂರು ಪ್ರಮುಖ ರೈಲ್ವೆ ನಿಲ್ದಾಣದ ಅಭಿವೃದ್ಧಿಯ ಕುರಿತು ಚರ್ಚೆ ನಡೆಸಿದರು, ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಸಂಸದ ಬಿವೈ ರಾಘವೇಂದ್ರ. ಜಿಲ್ಲೆಯಲ್ಲಿ ಜಾರಿಯಲ್ಲಿರುವ ರೈಲ್ವೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ್ದೇನೆ. ರೈಲ್ವೆ ಇಲಾಖೆ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಶಿವಮೊಗ್ಗ ಶಿಕಾರಿಪುರ ರಾಣೇಬೆನ್ನೂರು ನೂತನ ರೈಲ್ವೆ ಮಾರ್ಗದ ಪ್ರಗತಿ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ. ಶಿವಮೊಗ್ಗದ ಕೋಟೆ ಗಂಗೂರಿನಲ್ಲಿ ಕೋಚಿಂಗ್ ಡಿಪೋ ನಿರ್ಮಾಣ ನಡೆಯುತ್ತಿದೆ.
ಇದರಿಂದಾಗಿ ಮುಂದಿನ ದಿನಗಳಲ್ಲಿ ವಂದೇ ಭಾರತ್ ಸೇರಿದಂತೆ ವಿವಿಧ ರೈಲುಗಳ ಓಡಾಟ ಮತ್ತು ದುರಸ್ತಿಗೆ ಅನುಕೂಲವಾಗಲಿದೆ. ಶಿವಮೊಗ್ಗ ಶಿಕಾರಿಪುರ ರಾಣೇಬೆನ್ನೂರು ನೂತನ ರೈಲ್ವೆ ಮಾರ್ಗಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡು ಕಾಮಗಾರಿ ಆರಂಭಗೊಂಡಿದೆ. ನಿಗದಿತ ಕಾಲಮಿತಿಯೊಳಗೆ ಈ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಹಾಗೆಯೇ ಬೀರೂರು ಶಿವಮೊಗ್ಗ ಜೋಡಿ ಮಾರ್ಗದ ನಿರ್ಮಾಣಕ್ಕೂ ಸರ್ಕಾರ ಮುಂದಾಗಿದೆ. ಅಲ್ಲದೆ ತಾಳಗುಪ್ಪ ಶಿರಸಿ ಮಾರ್ಗವಾಗಿ ಕೊಂಕಣ ರೈಲ್ವೆ ಸಂಪರ್ಕಿಸುವ ಕುರಿತು ಮತ್ತೊಮ್ಮೆ ಪರಿಶೀಲನೆ ನಡೆಯಲಿದೆ. ಶಿವಮೊಗ್ಗ ಸಾಗರ ಸೇರಿದಂತೆ ಜಿಲ್ಲೆಯಲ್ಲಿ ಮೂರು ಕಡೆ ಗತಿ ಶಕ್ತಿ ಯೋಜನೆ ಅಡಿ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ ಎಂದ ಸಂಸದ ಬಿ.ವೈ.ರಾಘವೇಂದ್ರ
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಇದನ್ನು ಒದಿ…
Recent Comments