Breaking News

ಕೇಂದ್ರ ಸಚಿವ ನಿತಿನ್ ಗಡ್ಕರಿಯವರೊಂದಿಗೆ ಶಿವಮೊಗ್ಗ ಸಂಸದಬಬಿ ವೈ ರಾಘವೇಂದ್ರ ಮಹತ್ವದ ಚರ್ಚೆ.. ಇಲ್ಲಿದೆ ಡೀಟೇಲ್ಸ್..

Cnewstv / 01.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ಕೇಂದ್ರ ಸಚಿವ ನಿತಿನ್ ಗಡ್ಕರಿಯವರೊಂದಿಗೆ ಶಿವಮೊಗ್ಗ ಸಂಸದಬಬಿ ವೈ ರಾಘವೇಂದ್ರ ಮಹತ್ವದ ಚರ್ಚೆ.. ಇಲ್ಲಿದೆ ಡೀಟೇಲ್ಸ್..

ನವದೆಹಲಿ : ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ನಿತಿನ್ ಗಡ್ಕರಿಯವರನ್ನು ಇಂದು ಅವರ ಗೃಹ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರರವರು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಮನವಿ ಮಾಡಿದರು.

1) ಆಗುಂಬೆಘಾಟಿ ರಸ್ತೆಗೆ ಪರ್ಯಾಯವಾಗಿ ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ.

2) ಕುಂದಾಪುರದಿಂದ ಗಂಗೊಳ್ಳಿ ಬಂದರಿನವರೆಗೆ 5.60 ಕಿ.ಮೀ ಉದ್ದದ ರಸ್ತೆ ಹಾಗು ಭಾರಿ ಸೇತುವೆ ನಿರ್ಮಾಣ.

3) ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ವಿವಿಧೋದ್ದೇಶ ಬಂದರಿನವರೆಗೆ ತಾರಾಪತಿ ಅಳವೆಕೋಡಿ ಮೂಲಕ ವಿಸ್ತರಣೆ ಮಾಡಿ 3.80 ಕಿ.ಮೀ ಉದ್ದದ ರಸ್ತೆ ಹಾಗು ಸೇತುವೆಗಳ ನಿರ್ಮಾಣ.

4) ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ರಾಣಿಬೆನ್ನೂರಿನವರೆಗೆ ಬಾಕಿ ಉಳಿದ ಭಾಗಗಳಲ್ಲಿ ದ್ವಿಪಥ ರಸ್ತೆ ನಿರ್ಮಾಣ

5) ರಾ. ಹೆದ್ದಾರಿ 369 ಇ ಸಾಗರದಿಂದ ಮರಕುಟಕವರೆಗೆ ದ್ವಿಪಥ ರಸ್ತೆ (ಸಾಗರ ಪಟ್ಟಣದ ಬೈಪಾಸ್ ರಸ್ತೆ ಸೇರಿ) ನಿರ್ಮಾಣ

ಸನ್ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಸಂಬಂದಿಸಿದ ಕೇಂದ್ರ ಭೂಸಾರಿಗೆ ಮಂತ್ರಾಲಯದ ಅಧಿಕಾರಿಗಳಿಗೆ ಸದರಿ ಕಾಮಗಾರಿಗಳ ಯೋಜನಾವರದಿ ತಯಾರಿಸಲು ಸಮಾಲೋಚಕರನ್ನು ತಕ್ಷಣ ನಿಯೋಜಿಸಲು ಸೂಚಿಸಿದ್ದು ಯೋಜನಾ ವರದಿ ಪಡೆದು ಮಂಜೂರಾತಿ ನೀಡಲು ಸಹ ಕ್ರಮವಹಿಸಲು ಸೂಚಿಸಿದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು ಒದಿ…

Leave a Reply

Your email address will not be published. Required fields are marked *

*