Cnewstv / 01.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಕಂದಕಕ್ಕೆ ಉರುಳಿದ KSRTC ಬಸ್..
ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಒಂದು ಕಂದಕಕ್ಕೆ ಉರುಳಿದ ಘಟನೆ ಇಂದು ನಡೆದಿದೆ.
ಬೆಂಗಳೂರಿನಿಂದ ಭಟ್ಕಳಕ್ಕೆ ಹೋಗುತ್ತಿದ್ದ ಬಸ್ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮತ್ತಿ ಮನೆ ಸಮೀಪದ ಬೊಪ್ಪನ ಮನೆ ಗ್ರಾಮದ ಹತ್ತಿರ ಮುಂಬಾಗದಿಂದ ಬರುತ್ತಿದ್ದ ವಾಹನವನ್ನು ತಪ್ಪಿಸಲು ಹೋಗಿ ಕಂದಕಕ್ಕೆ ಬಿದ್ದಿದೆ.
ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಅದರಲ್ಲಿ 15 ಪ್ರಯಾಣಿಕಾರಿಗೆ ಗಾಯಗಳಾಗಿದೆ. ಸ್ಥಳೀಯರ ಸಹಾಯದಿಂದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದ್ದು ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments