Cnewstv / 05.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಗುಡ್ಡ ಕುಸಿತ ರಾಷ್ಟ್ರೀಯ ಹೆದ್ದಾರಿ ಬಂದ್.. ವಾಹನ ಸಂಚಾರ ಅಸ್ತವ್ಯಸ್ತ.
ಶಿವಮೊಗ್ಗ : ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ವಾಹನ ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ..
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿಯ ಸಮಗೋಡು ಸಮೀಪ ಭಾರೀ ಗುಡ್ಡ ಕುಸಿತವಾಗಿದೆ. ಪರಿಣಾಮ ರಾಣಿಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ-766c ಯಲ್ಲಿ ವಾಹನ ಸಂಚಾರ ಸ್ಥಗಿತ.
ಹೊಸನಗರ ತಾಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಹಲವು ಅವಘಡಗಳನ್ನು ಸೃಷ್ಟಿ ಮಾಡಿದೆ. ಜೆಸಿಬಿ ಯಂತ್ರ ಬಳಸಿ ಮಣ್ಣು ತೆರೆಯುವ ಕಾರ್ಯ ಆರಂಭ ಮಾಡಲಾಗಿದೆ. ಅದರೆ ಭಾರಿ ಮಳೆಯಿಂದ ಮಣ್ಣು ತೆಗಿಯುವ ಕಾರ್ಯಕ್ಕೆ ಅಡ್ಡಿಯಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ…
Recent Comments