Cnewstv / 11.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ…
ಬೆಂಗಳೂರು : ಕರ್ನಾಟಕದ ಖ್ಯಾತ ನಿರೂಪಕಿ ಅಪರ್ಣಾ (51) ಅವರು ನಿಧನರಾಗಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ರಾತ್ರಿ ನಿಧನರಾಗಿದ್ದಾರೆ. ಇವರ ಅಗಲಿಕೆಗೆ ಕನ್ನಡ ಸಿನಿಮಾ ರಂಗದ ನಟರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಲಿಲ್ಲ. ಸಾಲು ಸಾಲು ಸಿನಿಮಾಗಳು, ಕಿರುತೆರೆ, ವೇದಿಕೆಗಳಲ್ಲಿ ಮನೋಜ್ಞ ನಿರೂಪಣೆ ಮೂಲಕವೇ ಅವರು ಮನೆಮಾತಾಗಿದ್ದರು. ಅದರಲ್ಲೂ, 80 ಮತ್ತು 90ರ ದಶಕದಲ್ಲಿ ಕನ್ನಡ ಕಿರುತೆರೆ ನಿರೂಪಕಿಯಾಗಿ ಜನಪ್ರಿಯತೆ ಗಳಿಸಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ..
Recent Comments