Breaking News

ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ…

Cnewstv / 19.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ…

ಶಿವಮೊಗ್ಗ : ಇಂದು ಬೆಳ್ಳಂಬೆಳಿಗ್ಗೆ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾ. ಪಂ. ಅಧ್ಯಕ್ಷ ನಾಗೇಶ್ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

ಶಿವಮೊಗ್ಗದ ಕೃಷಿ ನಗರದಲ್ಲಿರುವ ಕೃಷಿ ಇಲಾಖೆ ಅಧಿಕಾರಿ ಪ್ರಕಾಶ್ ನಿವಾಸದ ಮೇಲೆ ಲೋಕಾ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದು, ಪ್ರಕಾಶ್ ವಿಚಾರಣೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್.ಪಿ. ಮಂಜುನಾಥ ಚೌಧರಿ, ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ಇದನ್ನು ಒದಿ…

Leave a Reply

Your email address will not be published. Required fields are marked *

*