ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..

Cnewstv / 23.08.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ.

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ‘ಹೊಯ್ಸಳ’ ಮತ್ತು ‘ಕೆಳದಿ ಚೆನ್ನಮ್ಮ’ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.
ಈ ಪ್ರಶಸ್ತಿಗೆ ಆಯ್ಕೆ ಆಗುವಂತಹ ಮಕ್ಕಳು ಸೂಚಿತ ಕ್ಷೇತ್ರಗಳಲ್ಲಿ ಅಪ್ರತಿಮ ಪ್ರತಿಭೆ ಉಳ್ಳವರಾಗಿದ್ದು, ಅವರು ಸಾಧಿಸಿದ ಪ್ರತಿಭೆಯ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿರಬೇಕು. ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಮಕ್ಕಳು ಕನಿಷ್ಠ 5 ವರ್ಷ ಕರ್ನಾಟಕ ರಾಜ್ಯದಲ್ಲಿ ನೆಲಸಿರಬೇಕು, ಈ ಬಗ್ಗೆ ಸ್ವಯಂ ದೃಢೀಕರಣ ಪತ್ರ ಸಲ್ಲಿಸುವುದು. ರಾಷ್ಟç/ರಾಜ್ಯ/ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿರುವ ಪ್ರಶಸ್ತಿ ಪಡೆದಿರುವ ಪತ್ರ ಸಲ್ಲಿಸುವುದು. ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಪ್ರಶಸ್ತಿ ನೀಡಲು ಅವಕಾಶವಿರುವುದಿಲ್ಲ. ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪ್ರಮಾಣೀಕರಿಸಿರಬೇಕು ಹಾಗೂ ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.

ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 21 ರೊಳಗೆ ಈ ಕಚೇರಿಗೆ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295514 ನ್ನು ಸಂಪರ್ಕಿಸುವುದು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ಇದನ್ನು ಒದಿ…

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments