Cnewstv / 27.08.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ..
ಶಿವಮೊಗ್ಗ : ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ.
ಸಾಗರ ತಾಲೂಕು ಕುದರೂರು ಗ್ರಾ.ಪಂ ಬೈನೆಮನೆ ಗ್ರಾಮದ
ಆಶೋಕ(42) ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ರೈತ. ರೈತನಿಗೆ ಸೇರಿದ್ದ ಎರಡು ಎಕರೆ ಅಡಕೆ ತೋಟದಲ್ಲಿ ಕೊಳೆ ರೋಗ ಕಾಣಿಸಿಕೊಂಡಿದ್ದ ಬೆಳೆ ನಾಶವಾಗಿದೆ. ರಾಷ್ಟ್ರೀಕೃತ ಬ್ಯಾಂಕ್ ಕೆನರಾ ಬ್ಯಾಂಕ್ ,ತುಂಗಾ ಸೇರಿದಂತೆ ಇತರ ಸಂಘ ಸಂಸ್ಥೆಗಳಿಂದ ಸಾಲ ಪಡೆದಿದ್ದರು. ಬ್ಯಾಂಕ್ ನಿಂದ ಒಟಿಎಸ್- One Time Settlement ನೋಟಿಸ್ ನೀಡಲಾಗಿತ್ತು.
ಮೃತ ರೈತ ಪತ್ನಿ ಹಾಗೂ ಮೂರು ಮಕ್ಕಳನ್ನು ಅಗಲಿದ್ದರಾರೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ನಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
C News TV Kannada News Online in cnewstv