Cnewstv / 03.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಬೃಹತ್ ಮಾನವ ಸರಪಳಿ ಮೂಲಕ ಪ್ರಜಾಪ್ರಭುತ್ವ ಕುರಿತು ಜಾಗೃತಿ ಕಾರ್ಯಕ್ರಮ..
ಶಿವಮೊಗ್ಗ : ಸೆ.15 ರಂದು ಜಿಲ್ಲೆಯಲ್ಲಿ ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಇತರೆ ವಿಷಯಗಳ ಕುರಿತು ಮಾಹಿತಿ ನೀಡಲು ಶಂಕರಘಟ್ಟದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಮಾತನಾಡಿದರು.
ಸೆ.15 ರಂದು ರಾಜ್ಯಾದ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಬೃಹತ್ ಮಾನವ ಸರಪಳಿ ಮೂಲಕ ಪ್ರಜಾಪ್ರಭುತ್ವ ಕುರಿತು ಜಾಗೃತಿ ಮೂಡಿಸಲಾಗುವುದು. ಜಿಲ್ಲೆಗೆ ಒಂದು ಮಾರ್ಗನಕ್ಷೆ ನೀಡಿದ್ದು 60 ಕಿ ಮೀ. ಮಾನವ ಸರಪಳಿ ಜೊತೆಗೆ ಶಾಲಾ ಮಕ್ಕಳು, ಜನರು ಸೇರಿ ಸುಮಾರು ೫೦ ರಿಂದ ೬೦ ಲಕ್ಷ ಗಿಡ ನೆಟ್ಟು ದಾಖಲೆ ನಿರ್ಮಿಸುವ ಗುರಿ ಹೊಂದಲಾಗಿದೆ. ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿರು, ವಿದ್ಯಾರ್ಥಿ ಗಳು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.
ಇದನ್ನು ಒದಿ…
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
Recent Comments