Cnewstv / 13.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಾಹನ ಸಂಚಾರ ಮಾರ್ಗ ಬದಲಾವಣೆ.
ಶಿವಮೊಗ್ಗ : ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡAತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿದ್ದಾರೆ.
ಸೆ.17 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ, ಎ.ಎ ಸರ್ಕಲ್, ನೆಹರು ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ ಮಾರ್ಗವಾಗಿ ಮಹಾವೀರ ಸರ್ಕಲ್, ಡಿ.ವಿ.ಎಸ್ ಸರ್ಕಲ್, ಕಾನ್ವೆಂಟ್ ರಸ್ತೆ, ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದ ಹತ್ತಿರ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗುವುದು.
• ಬೆಂಗಳೂರು ಭದ್ರಾವತಿ, ಎನ್‌ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಮತ್ತು ಸಿಟಿ ಬಸ್‌ಗಳು, ಕಾರುಗಳು ಎಂ.ಆರ್.ಎಸ್ ಸರ್ಕಲ್ ನಿಂದ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
• ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್‌ಗಳು ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
• ಹೊನ್ನಾಳಿ, ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನಗಳು ಮತ್ತು ಬಸ್‌ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರ, ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
• ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರೀ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್, ಆಲ್ಕೊಳ ಸರ್ಕಲ್, ಪೊಲೀಸ್ ಚೌಕಿ, ರಾಜ್ ಕುಮಾರ್ ಸರ್ಕಲ್, ಬೊಮ್ಮನಕಟ್ಟೆ ಮುಖಾಂತರವಾಗಿ ಸವಳಂಗ ರಸ್ತೆಗೆ ಹೋಗುವುದು.
• ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆಯ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು.
• ಶಿಕಾರಿಪುರ, ಸೊರಬ, ಅನವಟ್ಟಿ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಮತ್ತು ಹೊರ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರಿ ವಾಹನಗಳು ಉಷಾ ನರ್ಸಿಂಗ್ ಹೋಂ ಸರ್ಕಲ್, ಲಕ್ಷಿö್ಮ ಟಾಕೀಸ್ ಸರ್ಕಲ್, ಪೋಲಿಸ್ ಚೌಕಿ, ಆಲ್ಕೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸುವುದು.
ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ…
• ಕೋಟೆ ರಸ್ತೆ, ಓಲ್ಡ್ ಬಾರ್ ಲೈನ್ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು.
• ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣೆಗೆಯ ಮಾರ್ಗವಾದ ಭೀಮೇಶ್ವರ ದೇವಸ್ಥಾನದಿಂದ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ, ಎ.ಎ ಸರ್ಕಲ್, ನೆಹರು ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ, ಮಹಾವೀರ್ ಸರ್ಕಲ್, ಡಿ.ವಿ.ಎಸ್ ಸರ್ಕಲ್, ಕಾನ್ವೆಂಟ್ ರಸ್ತೆ, ಕೋಟೆ ರಸ್ತೆ, ಭೀಮೇಶ್ವರ ದೇವಸ್ಥಾನವರೆಗಿನ ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಇದನ್ನು ಒದಿ…
Recent Comments