Cnewstv / 23.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಕಾಡಾನೆ ದಾಳಿ, ರೈತರ ಬೆಳೆ ಸಂಪೂರ್ಣ ನಾಶ..
ಶಿವಮೊಗ್ಗ : ಕಾಡಾನೆ ದಾಳಿಯಿಂದ ರೈತರ ಬೆಳೆ ಸಂಪೂರ್ಣ ನಾಶವಾದ ಘಟನೆ ಶಿವಮೊಗ್ಗದ ಪುರದಾಳು ಗ್ರಾಮದಲ್ಲಿ ನಡೆದಿದೆ.
ಮಲೆನಾಡಿನಲ್ಲಿ ಮತ್ತೆ ಕಾಡಾನೆಗಳ ಹಾವಳಿ ಮುಂದುವರೆದಿದೆ. ತಡರಾತ್ರಿ ಎರಡು ಕಾಡಾನೆಗಳು ರಾಜೇಶ್ ಹಾಗೂ ಬೀರಪ್ಪ ಎಂಬುವರ ತೋಟ ಹಾಗೂ ಹೊಲಕ್ಕೆ ದಾಳಿ ಮಾಡಿದೆ. ಅಡಿಕೆ, ತೆಂಗಿನ ಮರಗಳನ್ನು ಬುಡಮೇಲು ಮಾಡಿದೆ. ಜೋಳ ಮತ್ತು ಕಬ್ಬು ಸಂಪೂರ್ಣವಾಗಿ ನಾಶವಾಗಿದೆ.
ಹಲವು ದಿನಗಳ ಹಿಂದೆಯೇ ಆನೆಗಳ ಬಗ್ಗೆ ಮಾಹಿತಿ ನೀಡಿದರು ಕೂಡ ಅರಣ್ಯ ಇಲಾಖೆ ಯಾವುದೇ ರೀತಿಯಾದಂತಹ ಕ್ರಮವನ್ನು ಕೈಗೊಂಡಿಲ್ಲ ಎಂದು ರೈತರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಆನೆ ದಾಳಿಗೆ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಇದನ್ನು ಒದಿ..
C News TV Kannada News Online in cnewstv