ಶಿವಮೊಗ್ಗ: 5 ಸಾವಿರ ಲಂಚ ಪಡೆಯುತ್ತಿದ್ದ ಇಂಡುವಳ್ಳಿ ಗ್ರಾ.ಪಂ ನ ಪ್ರಭಾರ ಪಿಡಿಓ ಈಶ್ವರಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸೊರಬ ತಾಲೂಕಿನ ಇಂಡುವಳ್ಳಿ ಗ್ರಾ.ಪಂ ನ ಪ್ರಭಾರ ಪಿಡಿಓ ಈಶ್ವರಪ್ಪ ಇ- ಖಾತೆಯೊಂದನ್ನ ಮಾಡಿಕೊಡಲು 5 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು.
ಇಂಡುವಳ್ಳಿ ಗ್ರಾಮದ ಮಹಮ್ಮದ್ ಗೌಸ್ ಎಂಬವರು ತಮ್ಮ ತಂದೆಯ ಹೆಸರಿನಲ್ಲಿದ್ದ ಮನೆಯ ಖಾತೆಯನ್ನು ತಾಯಿಯ ಹೆಸರಿಗೆ ಬದಲಾಯಿಸಲು, ಇಂಡುವಳ್ಳಿ ಗ್ರಾಮ ಪಂಚಾಯ್ತಿಗೆ ಅರ್ಜಿ ಸಲ್ಲಿಸಿದ್ದರು. ಇ-ಖಾತೆ ಮಾಡಿಕೊಡಬೇಕಿದ್ದ ಪಿಡಿಓ ಈಶ್ವರಪ್ಪ ವಿಳಂಬ ಮಾಡುತ್ತಿದ್ದರಲ್ಲದೇ, ಲಂಚಕ್ಕೆ ಸಹ ಬೇಡಿಕೆ ಇಟ್ಟಿದ್ದರು.
ಅದರಂತೆ ಇಂದು ಬೆಳಿಗ್ಗೆ ಸೊರಬದ ಪೋಸ್ಟ್ ಆಫೀಸ್ ಕಛೇರಿ ಬಳಿ 5 ಸಾವಿರ ರೂ. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲಂಚದ ಹಣ ಸಹಿತ ಪಿಡಿಓ ಈಶ್ವರಪ್ಪರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರೆಸಿದ್ದಾರೆ.
ಲೋಕಾಯುಕ್ತ ಶಿವಮೊಗ್ಗ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
C News TV Kannada News Online in cnewstv