ಶಿವಮೊಗ್ಗ: ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಹಾಗೂ ಕೊಲ್ಲೂರಿಗೆ ತೆರಳುತ್ತಿದ್ದ ಟಿಟಿ ನಡುವೆ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಿಟ್ಟೂರಿನಲ್ಲಿ ನಡೆದಿದೆ.
ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದ್ದು, 8 ಜನರು ಗಾಯಗೊಂಡಿದ್ದಾರೆ.
ದೇವರ ದರ್ಶನಕ್ಕೆ ಬಂದವರಿಗೆ ಅಪಘಾತ:
ಕೊಲ್ಲೂರು ಮೂಕಾಂಬಿಕೆಯ ದರ್ಶನ ಮುಗಿಸಿ, ಕೊಡಚಾದ್ರಿ ಪ್ರವಾಸಕ್ಕೆ 8 ಜನರು ಜೀಪ್ ನಲ್ಲಿ ತೆರಳುತ್ತಿದ್ದರು. ಇನ್ನೋಂಡೆದೆ ಶಿವಮೊಗ್ಗದಿಂದ ಟಿಟಿಯಲ್ಲಿ ಕೊಲ್ಲೂರು ಹಾಗೂ ಸಿಗಂದೂರು ದೇವಿಯ ದರ್ಶನಕ್ಕೆ ಹೊರಟ್ಟಿದ್ದರು. ಈ ನಡುವೆ ಮರಕುಟಿಗ ಬಳಿ ಅಪಘಾತ ನಡೆದಿದ್ದು, ಜೀಪ್ ನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನ ಹೊಸನಗರ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಕುಂದಾಪುರಕ್ಕೆ ಶಿಫ್ಟ್ ಮಾಡಲಾಗಿದೆ.
ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಉಳಿದವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Recent Comments