cnewstv | 26.12.2024 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ
ನವದೆಹಲಿ : ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ.
92 ವರ್ಷದ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು ಕೊನೆಯುಸಿರೆಳೆದಿದ್ದಾರೆ. ಇಂದು ರಾತ್ರಿ 8 ಗಂಟೆ ಸುಮಾರಿಗೆ ಏಮ್ಸ್ ಆಸ್ಪತ್ರೆಗೆ ದಾಖಲಾದ ಮನಮೋಹನ್ ಸಿಂಗ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಏಮ್ಸ್ ಆಸ್ಪತ್ರೆಯತ್ತ ಕಾಂಗ್ರೆಸ್ ನಾಯಕರ ದೌಡಾಯಿಸಿದ್ದು, ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಅವರು ಅಂತಿಮ ದರ್ಶನಕ್ಕೆ ತೆರಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬೆಳಗಾವಿಯಿಂದ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399