ಶಿವಮೊಗ್ಗ: ಕಲ್ಲೂರು ಮಂಡ್ಲಿ ಸಮೀಪದ ಬಂಡೆ ಕಲ್ಲೂರು ತುಂಗಾ ಚಾನಲ್ ನಲ್ಲಿ ಈಜಲು ಹೋದ ಬಾಲಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಹಳೇ ಮಂಡ್ಲೀ ನಿವಾಸಿ ಮೋಹಿತ್(15) ಮೃತ ಬಾಲಕ.
ಬುಧವಾರ ಸ್ನೇಹಿತರೊಂದಿಗೆ ಈಜಲು ಹೋದಾಗ ಚಾನಲ್ ನಲ್ಲಿ ಮೋಹಿತ್ ನಾಪತ್ತೆಯಾಗಿದ್ದ. ಬಳಿಕ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಗಿತ್ತು. ಬುಧವಾರ ಸಂಜೆಯಿಂದ ರಾತ್ರಿವರೆಗೂ ಶೋಧ ಕಾರ್ಯ ನಡೆಸಿದರೂ ಸುಳಿವು ಸಿಕ್ಕಿರಲಿಲ್ಲ. ಗುರುವಾರ ಸಂಜೆ ಕಾರ್ಯಾಚರಣೆ ಮುಂದುವರೆಸಿದಾಗ ಶವ ಪತ್ತೆಯಾಗಿದೆ.
ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
C News TV Kannada News Online in cnewstv