cnewstv | 04.01.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶ್ರೀ ಗುರುಬಸವ ಮಹಾಶಿವಯೋಗಿಗಳ ಪುಣ್ಯ ಸ್ಮರಣೋತ್ಸವ ಹಾಗೂ ಜಯಂತಿ ಅಂಗವಾಗಿ ವಿವಿಧ ಸ್ಪರ್ಧೆಗಳು..
ಶಿವಮೊಗ್ಗ : ನಗರದ ಬೆಕ್ಕಿನ ಕಲ್ಮಠದ ಹಿರಿಯ ಜಗದ್ಗುರು ಶ್ರೀ ಗುರುಬಸವ ಮಹಾಶಿವಯೋಗಿಗಳ 113ನೇ ಪುಣ್ಯ ಸ್ಮರಣೋತ್ಸವ ಹಾಗೂ ಜಯಂತಿ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ನಾಗರೀಕರಿಗೆ ವಿವಿಧ ಸ್ಪರ್ಧೆಗಳನ್ನು ಬೆಕ್ಕಿನ ಕಲ್ಮಠದಲ್ಲಿ ಏರ್ಪಡಿಸಲಾಗಿದೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ್ಷೆ ದಿವ್ಯ ಪ್ರೇಮ್ ತಿಳಿಸಿದರು.
ಇಂದು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಯಂತಿಯ ಅಂಗವಾಗಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು ಜನವರಿ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ಈ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.
ಜನವರಿ 16ರಂದು ಬೆಳಿಗ್ಗೆ 10.30 ಕ್ಕೆ 10 ರಿಂದ 18 ವರ್ಷ ವಯೋಮಾನದವರಿಗೆ ಹಾಗೂ ಅದಕ್ಕೂ ಮೇಲ್ಪಟ್ಟ ವಯೋಮಾನದವರಿಗೆ ವಚನ ಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಅಲ್ಲದೆ 10 ವರ್ಷ ವಯೋಮಿತಿಯ ಒಳಗಿನವರಿಗೆ ವಚನ ಕಂಠಪಾಠ ಸ್ಪರ್ಧೆಯನ್ನು ಕೂಡ ಏರ್ಪಡಿಸಲಾಗಿದೆ ಐದು ವಚನಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಜನವರಿ 17ರಂದು ಬೆಳಗ್ಗೆ 10.30 ಕ್ಕೆ 18 ವರ್ಷ ಮೇಲ್ಪಟ್ಟವರಿಗೆ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ಈ ಸ್ಪರ್ಧೆಯಲ್ಲಿ ಬಣ್ಣವನ್ನು ಬಳಸಬಹುದಾಗಿದೆ ಸ್ಪರ್ದಾಳುಗಳಿಗೆ ಸ್ಥಳಾವಕಾಶವನ್ನು ಮಾಡಿಕೊಳ್ಳಲಾಗುತ್ತಿದ್ದು ಒಂದು ಗಂಟೆ ಅವಧಿಯಲ್ಲಿ ರಂಗೋಲಿ ಚಿತ್ರವನ್ನು ಬಿಡಿಸಬಹುದಾಗಿದೆ ಎಂದರು.
ಅದೇ ದಿನ ಜಾನಪದ ಗೀತೆಗಳ ಸ್ಪರ್ಧೆಯನ್ನು 18 ವರ್ಷ ಮೇಲ್ಪಟ್ಟವರಿಗೆ ಏರ್ಪಡಿಸಲಾಗಿದ್ದು ಮೂರರಿಂದ ಐದು ಜನರ ತಂಡ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ತಿಳಿಸಿದರು.
ಜನವರಿ 18ರಂದು ಜಿಲ್ಲಾ ಮಟ್ಟದ ಶಿವಾರ್ಪಣಂ ಶಿವ ಭಜನಾ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಈ ಸ್ಪರ್ಧೆಯಲ್ಲಿ ಭಾಗವಹಿಸುವ ತಂಡದಲ್ಲಿ ಆರರಿಂದ ಹತ್ತು ಜನ ಸ್ಪರ್ಧಾಳು ಇರಬೇಕಾಗುತ್ತದೆ. ಶಿವನಿಗೆ ಸಂಬಂಧಿಸಿದ ಭಜನೆಯನ್ನು ಮಾತ್ರ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದ ಅವರು, ಎಲ್ಲಾ ಸ್ಪರ್ಧೆಯಲ್ಲಿ ವಿಜೇತರಾದ ಅವರಿಗೆ ಪ್ರಥಮ ದ್ವಿತೀಯ ತೃತೀಯ ಹಾಗೂ ಸಮಾಧಾನಕರ ಬಹುಮಾನಗಳನ್ನ ಸ್ಥಳದಲ್ಲೇ ವಿತರಿಸಲಾಗುವುದು ಎಂದು ತಿಳಿಸಿದರು.
ಅಂದು ಶ್ರೀಗಳ ಸ್ಮರಣೋತ್ಸವದ ಅಂಗವಾಗಿ ಆನ್‍ಲೈನ್‍ನಲ್ಲಿ ಪ್ರಶ್ನೋತ್ತರ ಸ್ಪರ್ಧೆಯನ್ನು ವಚನ ಸಾಹಿತ್ಯ ಕುರಿತು ಏರ್ಪಡಿಸಲಾಗಿದ್ದು ಸಂಜೆ 4:00ಗೆ 5 ರಿಂದ 10 ವರ್ಷದೊಳಗಿನ ಮಕ್ಕಳಿಂದ ಸರ್ವಧರ್ಮ ಮಹಾಪುರುಷರ ವೇಷಭೂಷಣ ಸ್ಪರ್ಧೆಯನ್ನು ಕೂಡ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಸ್ಪರ್ಧೆಗೆ ಬೇಕಾದಂತಹ ಎಲ್ಲಾ ಪರಿಕರಗಳನ್ನು ಸ್ಪರ್ದಾಳುಗಳೇ ತರಬೇಕಾಗುತ್ತದೆ ಎಂದ ಅವರು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಈಗಾಗಲೇ ಎಲ್ಲಾ ಶಾಲಾ ಕಾಲೇಜುಗಳಿಗೆ ಕೋರಿಕೆಯನ್ನು ಸಲ್ಲಿಸಲಾಗಿದೆ ನಾಗರೀಕರು ಕೂಡ ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ದಿವ್ಯಪ್ರೇಮ್ 9611474285 ಅಥವಾ ರತ್ನಮ್ಮ ಮಂಜುನಾಥ್ 9844646955ಗೆ ಸಂಪರ್ಕಿಸಬಹುದಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಉಪಾಧ್ಯಕ್ಷೆ ರತ್ನಮ್ಮ ಮಂಜುನಾಥ್, ಸ್ಮರಣೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಣುಕಾ ರಾಧ್ಯ, ವ್ಯೋಮಕೇಶಾರಾಧ್ಯ ಶಾಂತವೀರಯ್ಯ ಪಂಚಾಕ್ಷರಯ್ಯ, ಪರಮೇಶ್ವರಯ್ಯ, ಪ್ರಚಾರ ಸಮಿತಿಯ ಅಧ್ಯಕ್ಷ ಕೆ.ಆರ್.ಸೋಮನಾಥ್ ಇತರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments