ಶಿವಮೊಗ್ಗ: ನವಜಾತ ಗಂಡು ಶಿಶುವನ್ನು ಚೀಲದಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ನಗರದ ಶ್ರೀರಾಮಪುರದ 2ನೇ ಕ್ರಾಸ್ ನಲ್ಲಿ ಬೋರೆವಲ್ ಬಳಿ ಚೀಲದಲ್ಲಿ ಗಂಡು ಶಿಶುವನ್ನ ಬಿಟ್ಟು ಹೋಗಿದ್ದು, ಮಗು ಅಳುವುದನ್ನು ಕೇಳಿ ಇಂದು ಬೆಳಿಗ್ಗೆ ಸ್ಥಳೀಯರು ಚೀಲವನ್ನ ಪರೀಕ್ಷಿಸಿದ್ದಾರೆ. ಈ ವೇಳೆ ಚೀಲದಲ್ಲಿ ಮಗು ಇರುವುದನ್ನು ಗಮನಿಸಿ, ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಬರುವ ಮೊದಲೇ ಸ್ಥಳೀಯರು ಮಗುವಿನ ಆರೈಕೆ ಮಾಡಿದ್ದಾರೆ.
ಸದ್ಯ ಮಗುವನ್ನು ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಶಿಶು ಅಭಿವೃದ್ದಿ ಯೋಜನಾಧಿಕಾರಿ ಗಂಗಾಭಾಯಿ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ.
ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
C News TV Kannada News Online in cnewstv