cnewstv | 23.01.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಜಮೀನಿನಲ್ಲಿ ಟ್ರಾನ್ಸಫಾರ್ಮರ್ ಅಳವಡಿಸುವ ವೇಳೆ ಕಿರಿಕ್, ಸ್ಥಳದಲ್ಲಿಯೇ ಕೊಲೆ..
ಶಿವಮೊಗ್ಗ : ಜಮೀನಿನಲ್ಲಿ ಟ್ರಾನ್ಸ್ ಫಾರ್ಮರ್ ಅಳವಡಿಸುವ ವೇಳೆ ಕಿರಿಕ್ ನಡೆದು ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಕೊಲೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನ ದೊಡ್ಡೇರಿ ಗ್ರಾಮದ ಶಾಂತಕುಮಾರ್ (35) ಎಂದು ಗುರುತಿಸಲಾಗಿದೆ. ವಿದ್ಯುತ್ ಟ್ರಾನ್ಸ್ ಫಾರ್ಮರ್‌ನ್ನು ತಮ್ಮ ಜಮೀನಿನಲ್ಲಿ ಅಳವಡಿಸುವ ವಿಚಾರವಾಗಿ ಲೇಪಾಕ್ಷಿ ಎಂಬುವರ ಜೊತೆಗೆ ಜಗಳವಾಗಿ, ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಜಗಳದಲ್ಲಿ ಶಾಂತಕುಮಾರ್ ಮೇಲೆ ಲೇಪಾಕ್ಷಿ ಎಂಬುವರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪರಿಣಾಮ ಶಾಂತಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್‌ಪಿ ಮಿಥುನ್ ಕುಮಾರ್ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಲೇಪಾಕ್ಷಿ ಹಾಗೂ ಇನ್ನೊಬ್ಬರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಇದನ್ನು ಇದಿ…
Recent Comments