Breaking News

ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ : ಆರ್.ಎಂ. ಮಂಜುನಾಥಗೌಡ.

cnewstv | 23.01.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ : ಆರ್.ಎಂ. ಮಂಜುನಾಥಗೌಡ.

ಶಿವಮೊಗ್ಗ : ಕಳೆದ ಸಾಲಿನಲ್ಲಿ ಮಂಡಳಿ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ ಹೇಳಿದರು.

ಇಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಕಚೇರಿಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ 2025-26ನೇ ಸಾಲಿನ ಹೊಸ ದಿನಚರಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕಳೆದ ಸಾಲಿನಲ್ಲಿ ಮಂಜೂರಾದ 954 ಕಾಮಗಾರಿಗಳ ಪೈಕಿ 335 ಕಾಮಗಾರಿಗಳು ಪೂರ್ಣಗೊಂಡಿವೆ. ಪೂರ್ಣಗೊಂಡ ಕೆಲವು ಕಾಮಗಾರಿಗಳಿಗೆ ಪಾವತಿಯೂ ಆಗಿದೆ. 282 ಕಾಮಗಾರಿಗಳಿಗೆ ಅನುಮೋದನೆ ನೀಡಿ ಏಜೆನ್ಸಿ ನಿಗದಿಗೊಳಿಸಲಾಗಿದೆ. ಮಾರ್ಚ್ ಒಳಗೆ ಬಾಕಿ ಉಳಿದ ಕಾಮಗಾರಿಗಳು ಪೂರ್ಣಗೊಳ್ಳಬೇಕಿದೆ. ಮಂಡಳಿಯಲ್ಲಿ ಸುಮಾರು ರೂ. 60 ರಿಂದ 70 ಕೋಟಿ ಅನುದಾನವೂ ಇದೆ. ಕಾಮಗಾರಿಗಳು ಶೀಘ್ರವಾಗಿ ಪೂರ್ಣಗೊಳ್ಳಬೇಕಿದೆ. ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಸಂಬಂಧ ಶಾಸಕರಿಗೆ ಪತ್ರ ಬರೆಯಲಾಗಿದೆ ಎಂದರು.

ಜಿಲ್ಲೆಯಲ್ಲಿ ಮಂಡಳಿ ವತಿಯಿಂದ ಕಾಲುಸಂಕಗಳು, ಪೆವಿಲಿಯನ್, ಕುಂದಾದ್ರಿ ಬೆಟ್ಟದ ಬಳಿ, ಹುಂಚದಲ್ಲಿ ರಸ್ತೆ ಕಾಮಗಾರಿಗಳು ಸೇರಿದಂತೆ ಸುಮಾರು 1200 ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಮಗಾರಿಗಳ ವೀಕ್ಷಣೆಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಾಗುವುದು.

ಜಿಲ್ಲೆಯಲ್ಲಿ ಕಾಲುಸಂಕ, ಸೇತುವೆ ಮತ್ತು ಇತರೆ ಕಾಮಗಾರಿಗಳಿಗೆ ರೂ.200 ಕೋಟಿ ನಬಾರ್ಡ್ ಅನುದಾನಕ್ಕೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಮಂಜೂರಾದಲ್ಲಿ ಮುಂದಿನ ವರ್ಷದಿಂದ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಹಾಗೂ ಈ ಬಾರಿ ಪ್ರತಿ ಶಾಸಕರಿಗೆ ಮಂಡಳಿಯಿAದ ತಲಾ ರೂ.1 ಕೋಟಿ ಅನುದಾನ ನೀಡುವಂತೆ ಕೋರಲಾಗಿದೆ ಎಂದು ತಿಳಿಸಿದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು ಇದಿ…

Leave a Reply

Your email address will not be published. Required fields are marked *

*