Breaking News

ವಿಜಯನಗರದಲ್ಲಿ ಯುವತಿ ನೇಣಿಗೆ ಶರಣು

ಶಿವಮೊಗ್ಗ: ಆರೋಗ್ಯ ಸಮಸ್ಯೆಯಿಂದ ಮನನೊಂದಿದ್ದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಮೊಗ್ಗ ನಗರದ ನೇತಾಜಿ ಸರ್ಕಲ್ ಸಮೀಪದ ವಿಜಯನಗರ 4ನೇ ಮುಖ್ಯರಸ್ತೆಯಲ್ಲಿನ ಮನೆಯಲ್ಲಿ ಯುವತಿ ನೇಣಿಗೆ ಶರಣಾಗಿರುವ ಘಟನೆ ಬುಧವಾರ ಸಂಜೆ ನಡೆದಿದೆ.

ಸೌಮ್ಯ(25) ಮೃತ ಯುವತಿ.

ವಿಜಯನಗರದಲ್ಲಿ ಪೋಷಕರೊಂದಿಗೆ ವಾಸವಿದ್ದ ಸೌಮ್ಯ, ಬಿಕಾಂ ವ್ಯಾಸಂಗದ ಬಳಿಕ ಕಳೆದ 3 ವರ್ಷದಿಂದ ಮಾಚೇನಹಳ್ಳಿಯಲ್ಲಿರುವ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸೌಮ್ಯಳಿಗೆ ಪೋಷಕರು, ಶಿವಮೊಗ್ಗದ ಮೆಗ್ಗಾನ್ ಸೇರಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು.ಹೀಗಿದ್ದರೂ ಉಸಿರಾಟ ಸಮಸ್ಯೆ ಕಡಿಮೆಯಾಗಿರಲಿಲ್ಲ. ಇದರಿಂದ ಮನನೊಂದಿದ್ದ ಸೌಮ್ಯ, ನಿನ್ನೆ ಸಂಜೆ ಮನೆಯಲ್ಲಿ ಯಾರಿರದ ವೇಳೆ ತನ್ನ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ.

Leave a Reply

Your email address will not be published. Required fields are marked *

*