cnewstv | 24.01.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನೀರಿನ ಕಂದಾಯ ಕಟ್ಟಲು ಭಾನುವಾರ ವಿಶೇಷ ಕೌಂಟರ್.
ಶಿವಮೊಗ್ಗ : 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಜ.26ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ತರೆಯಲಾಗಿದೆ.
ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಗಾಂಧೀ ಬಜಾರ್ ಬಸವೇಶ್ವರ ದೇವಸ್ಥಾನದ ಹತ್ತಿರ, ಅರ್.ಎಂ.ಎಲ್.ನಗರ ಕಿದ್ವಾಯಿ ಶಾಲೆ ಎದುರು, ಪೊಲೀಸ್ ಚೌಕಿ ವಿನೋಬನಗರ ಪೊಲೀಸ್ ಠಾಣೆ ಎದುರು, ರವೀಂದ್ರನಗರ ಪಾರ್ಕ್ ಹತ್ತಿರ ಹಾಗೂ ಗುಡ್‌ಲಕ್ ಸರ್ಕಲ್ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆದಿದ್ದು, ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಇದಿ…
Recent Comments