ಶಿವಮೊಗ್ಗ: ತಾಲೂಕಿನ ಪುರದಾಳು ಗ್ರಾ.ಪಂ ವ್ಯಾಪ್ತಿಯ ಹನುಮಂತಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ, ಶುಕ್ರವಾರ ನಿವೃತ್ತರಾದ ವತ್ಸಲಾ ಕುಮಾರಿ ಅವರಿಗೆ ಗ್ರಾಮಸ್ಥರು ಆತ್ಮೀಯ ಬೀಳ್ಕೋಡುಗೆ ನೀಡಿ, ಗೌರವಿಸಿದ್ದಾರೆ.
ನಿವೃತ್ತ ಶಿಕ್ಷಕಿ ವತ್ಸಲಾರಿಗೆ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಿ, ನಿವೃತ್ತ ಜೀವನಕ್ಕೆ ಶುಭ ಹಾರೈಸಲಾಯಿತು.
ಚಿಕ್ಕಮಗಳೂರು ಜಿಲ್ಲೆಯ ಮೆಣಸೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವೃತ್ತಿ ಜೀವನ ಆರಂಭಿಸಿದ್ದ ವತ್ಸಲಾ ಅವರು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ 13 ಶಾಲೆಗಳಲ್ಲಿ 36 ವರ್ಷ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಶುಕ್ರವಾರ ನಿವೃತ್ತರಾಗಿದ್ದು, ಈ ಹಿನ್ನೆಲೆಯಲ್ಲಿ ಸನ್ಮಾನಿಸಿ, ಬೀಳ್ಕೋಡುಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ಪ್ರಶಾಂತ್, ದತ್ತರಾಜ್, ನವೀನ್, ಮಂಜುನಾಥ್, ಮೋಹನ್, ನಿತೀನ್, ನಿತ್ಯಾನಂದ, ಹರ್ಷ, ಸಚಿನ್ ಹಾಗೂ ಇತರರಿದ್ದರು.

Recent Comments