Breaking News

ಬೈಲ್ ವೀಲ್ಹಿಂಗ್ ಕೇಸ್: ಸವಾರನಿಗೆ 5 ಸಾವಿರ ರೂ. ದಂಡ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ವೀಲ್ಹಿಂಗ್ ಮಾಡಿದ ಸವಾರನೋರ್ವನಿಗೆ ಬರೋಬ್ಬರಿ 5 ಸಾವಿರ ರೂ. ದಂಡ ವಿಧಿಸಲಾಗಿದೆ.
ಶಿವಮೊಗ್ಗ ನಗರದ ಗಾರ್ಡನ್ ಎರಿಯಾದ ಗೌರವ್ ಲಾಡ್ಜ್ ಸಮೀಪ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ ಸವಾರನೋರ್ವ ವೀಲ್ಹಿಂಗ್ ಮಾಡಿದ್ದು, ತಿಳಿದು ಬಂದಿತ್ತು.
ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಸಂಚಾರಿ ಪೊಲೀಸರು ನೋಟೀಸ್ ನೀಡಿದ್ದರು. ಇದೀಗ ಶಿವಮೊಗ್ಗ ಜಿಲ್ಲಾ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಇಂದು 5 ಸಾವಿರ ದಂಡ ವಿಧಿಸಿ, ಆದೇಶಿಸಿದೆ.

Leave a Reply

Your email address will not be published. Required fields are marked *

*