Breaking News

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ.

cnewstv |  07.02.2025  | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ.

ಶಿವಮೊಗ್ಗ  : ಶಿವಮೊಗ್ಗ ಜಿಲ್ಲೆಯ 2024-25ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತೀರ್ಥಹಳ್ಳಿ ತಾಲೂಕಿನ ದೇವಂಗಿ ರೈತ ಸಂಪರ್ಕ ಕೇಂದ್ರದಲ್ಲಿ ಖಾಲಿಯಿರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ 45 ವರ್ಷ ವಯೋಮಿತಿಯುಳ್ಳ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಹೊಂದಿರುವವರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸ್ವವಿವರಗಳೊಂದಿಗೆ ಪದವಿ ಪ್ರಮಾಣ ಪತ್ರ, ಅಂತಿಮ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಸೇವಾ ಅನುಭವ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಫೆ. 15 ರೊಳಗಾಗಿ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಹಳೇ ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು ಇದಿ…

Leave a Reply

Your email address will not be published. Required fields are marked *

*