ಶಿವಮೊಗ್ಗ: ಇತ್ತೀಚೆಗೆ ಶರಣಾದ 6 ನಕ್ಸಲರ ಪೈಕಿ ಮುಂಡಗಾರು ಲತಾ ಹಾಗೂ ವನಜಾಕ್ಷಿ ಬಾಳೆಹೊಳೆ ಅವರನ್ನು ಬಾಡಿ ವಾರಂಟ್ ಮೂಲಕ ಶಿವಮೊಗ್ಗದ ತೀರ್ಥಹಳ್ಳಿ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದು, ಇಂದು ಮಧ್ಯಾಹ್ನದ ವೇಳೆಗೆ ತೀರ್ಥಹಳ್ಳಿ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ.
ಆಗುಂಬೆ ಪೊಲೀಸ್ ಠಾಣೆಯ 2 ಹಾಗೂ ಹೊಸನಗರ ಠಾಣೆಯ 1 ಕೇಸ್ ಸೇರಿದಂತೆ ಒಟ್ಟು ಮೂರು ಕೇಸ್ ಗಳಲ್ಲಿ ಇಬ್ಬರು ನಕ್ಸಲರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ.
ಇಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟಿರುವ ಶಿವಮೊಗ್ಗ ಪೊಲೀಸ್ ಟೀಂ, ಬಿಗಿ ಭದ್ರತೆಯಲ್ಲಿ ನಕ್ಸಲರನ್ನು ಕರೆತರುತ್ತಿದ್ದು, ಮಧ್ಯಾಹ್ನದ ವೇಳೆಗೆ ತೀರ್ಥಹಳ್ಳಿ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಮಂಗಳವಾರ ಇನ್ನೊಂದು ಪ್ರಕರಣದಲ್ಲಿ ತೀರ್ಥಹಳ್ಳಿಯ ಕೋರ್ಟ್ ಹಾಗೂ ಬುಧವಾರ ಹೊಸನಗರದ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದ ಲತಾ ವಿರುದ್ಧ ಒಟ್ಟು 85 ಪ್ರಕರಣಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲೇ ಲತಾ ವಿರುದ್ಧ ಆಗುಂಬೆ ಠಾಣೆಯಲ್ಲಿ 12/9, 51/09 ಹಾಗೂ 03/12 ಸೇರಿದಂತೆ 3 ಕೇಸ್ ದಾಖಲಾಗಿವೆ.
ಕಳೆದ ತಿಂಗಳಷ್ಟೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿ 6 ಜನ ನಕ್ಸಲರು ಮುಖ್ಯವಾಹಿನಿಗೆ ಬಂದಿದ್ದು, ಅದರಲ್ಲಿ ಇಬ್ಬರನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
C News TV Kannada News Online in cnewstv