Breaking News

ದಿ ಡೆವಿಲ್ : ಒಂಬತ್ತು ತಿಂಗಳ ಬಳಿಕ ಮತ್ತೆ ಶೂಟಿಂಗ್ ಆರಂಭ.

cnewstv | 12.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 

ದಿ ಡೆವಿಲ್ : ಒಂಬತ್ತು ತಿಂಗಳ ಬಳಿಕ ಮತ್ತೆ ಶೂಟಿಂಗ್ ಆರಂಭ.

ಮೈಸೂರು : ಬರೋಬ್ಬರಿ ಒಂಬತ್ತು ತಿಂಗಳ ಬಳಿಕ ನಟ ದರ್ಶನ್ ಮತ್ತೆ ಬಣ್ಣ ಹಚ್ಚಿ ಶೂಟಿಂಗ್ ಆರಂಭಿಸಲಿದ್ದಾರೆ.

ಇಂದಿನಿಂದ ಸಿನಿಮಾ ಚಿತ್ರೀಕರಣದಲ್ಲಿ ದರ್ಶನ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಚಿತ್ರೀಕರಣ ಇಂದು ಮೈಸೂರಿನ ಅತಿಥಿ ಗೃಹದಲ್ಲಿ ಶುರುವಾಗಿದೆ. ಇಂದು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ದರ್ಶನ್, ಸಿನಿಮಾ ಸೆಟ್​ಗೆ ತೆರಳಿದ್ದಾರೆ.

ನಟ ದರ್ಶನ್ ತೂಗುದೀಪ ಅವರು ಕಳೆದ ವರ್ಷ ಜೂನ್‌ನಲ್ಲಿ ದಿ ಡೆವಿಲ್ ಸಿನಿಮಾದ ಶೂಟಿಂಗ್‌ಗಾಗಿ ಮೈಸೂರಿನಲ್ಲಿ ಬೀಡುಬಿಟ್ಟಿದ್ದರು. ಅದೇ ಸಮಯಕ್ಕೆ ರೇಣುಕಾಸ್ವಾಮಿ ಕೇಸ್‌ನಲ್ಲಿ ದರ್ಶನ್ ಅವರನ್ನು ಅರೆಸ್ಟ್ ಮಾಡಿದ್ದರಿಂದ ಶೂಟಿಂಗ್ ಸ್ಥಗಿತಗೊಂಡಿತ್ತು. ಇದೀಗ ಸರಿಯಾಗಿ 9 ತಿಂಗಳ ಬಳಿಕ ದಿ ಡೆವಿಲ್ ಸಿನಿಮಾಗೆ ಚಿತ್ರೀಕರಣವನ್ನು ಪುನಃ ಆರಂಭ ಮಾಡಲಾಗುತ್ತಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು ಇದಿ…

 

Leave a Reply

Your email address will not be published. Required fields are marked *

*