Cnewstv | 19.03.2025 | ನವದೆಹಲಿ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
9 ತಿಂಗಳ ಬಳಿಕ ಭೂಮಿಗಿಳಿದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್..
ನವದೆಹಲಿ : ತಾಂತ್ರಿಕ ದೋಷದ ಕಾರಣ ಬಾಹ್ಯಾಕಾಶದಲ್ಲೇ ಕಳೆದ 9 ತಿಂಗಳು ಕಳೆದ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ನಾಸಾ ಹಾಗೂ ಸ್ಪೇಸ್ ಎಕ್ಸ್ ಜಂಟಿಯಾಗಿ ಭೂಮಿಗೆ ಕರೆತಂದಿದೆ. ಸ್ಪೇಸ್ಎಕ್ಸ್ ಕ್ರ್ಯೂ ಡ್ರ್ಯಾಗನ್ ಕ್ಯಾಪ್ಸುಲ್ ನೌಕೆ ಮೂಲಕ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಭೂಮಿಗೆ ಮರಳಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ಇಂದು(ಮಾ.19) ಬೆಳಗಿನ ಜಾವ 3.27ರ ಸುಮಾರಿಗೆ ಫ್ಲೋರಿಡಾದ ಸಮುದ್ರದ ಮೇಲೆ ಲ್ಯಾಂಡ್ ಆಗಿದ್ದಾರೆ. ಬಳಿಕ ನಾಸಾ ವಿಜ್ಞಾನಿಗಳ ತಂಡ ಸಮುದ್ರದಿಂದ ಸುರಕ್ಷಿತವಾಗಿ ನೌಕೆಯನ್ನು ದಡಕ್ಕೆ ಕರೆತರಲಾಗುತ್ತಿದೆ. ಭಾರತೀಯ ಕಾಲಮಾನದ ಪ್ರಕಾರ ಮಂಗಳವಾರ ಬೆಳಗ್ಗೆ 10:35ಕ್ಕೆ ಫ್ರೀಡಂ ಡ್ರಾಗನ್ ನೌಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಬೇರ್ಪಟ್ಟಿತು.
ನಿಕ್ ಹೇಗ್, ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್ ಗೊರ್ಬುನೊವ್ ನೌಕೆಯಲ್ಲಿದ್ದರು. ಭಾರತೀಯ ಕಾಲಮಾನದ ಪ್ರಕಾರ ಸುಮಾರು 3.27ಕ್ಕೆ ಡ್ರಾಗನ್ ನೌಕೆಯು ಮೆಕ್ಸಿಕನ್ ಕೊಲ್ಲಿಯಲ್ಲಿ ಫ್ಲೋರಿಡಾದ ಕರಾವಳಿಗೆ ಸಮೀಪವಿರುವ ಸಮುದ್ರದಲ್ಲಿ ಲ್ಯಾಂಡ್ ಆಯಿತು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಇದಿ…