Cnewstv | 20.03.2025 | ಬೆಂಗಳೂರು | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ವಿದ್ಯುತ್ ದರ ಏರಿಕೆ : ಗ್ರಾಹಕರಿಗೆ ಶಾಕ್ ನೀಡಿದ ಕೆಇಆರ್ಸಿ..
ಬೆಂಗಳೂರು : ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕೂಡ ಇದೀಗ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚು ಮಾಡಲಾಗಿದೆ.
ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.
ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ಗೃಹಜ್ಯೋತಿ ಯೋಜನೆಯಿಂದಾಗಿ ನಷ್ಟ ಆಗಿಲ್ಲ. ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ. ನಾವು 200 ಯೂನಿಟ್ ವಿದ್ಯುತ್ ಉಚಿತ ಕೊಟ್ಟಿದ್ದೇವೆ. 200 ಯೂನಿಟ್ ಮೇಲೆ ಬಳಸಿದವರಿಗೆ ದರ ಏರಿಕೆ ಅನ್ವಯವಾಗುತ್ತದೆ. ಬಿಜೆಪಿಯವರು ಶ್ರೀಮಂತರ ಪರವಾಗಿ ಮಾತನಾಡುತ್ತಿದ್ದಾರೆ. ಸರ್ಕಾರ ದರ ಏರಿಕೆ ಮಾಡುವುದಿಲ್ಲ.
ಸಚಿವ ಶರಣಪ್ರಕಾಶ್ ಪಾಟೀಲ
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಇದಿ…
C News TV Kannada News Online in cnewstv