Cnewstv | 21.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇಂದಿನಿಂದ SSLC ಪರೀಕ್ಷೆ ಆರಂಭ..
ಬೆಂಗಳೂರು : ಇಂದಿನಿಂದ SSLC ವಾರ್ಷಿಕ ಪರೀಕ್ಷೆಗಳು ರಾಜ್ಯದಲ್ಲಿ ಆರಂಭಗೊಳ್ಳಲಿವೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ರಾಜ್ಯದ 2,818 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ 8.42 ಲಕ್ಷ ವಿದ್ಯಾರ್ಥಿಗಳು ಸೇರಿ ಒಟ್ಟು 8,96,887 ಮಕ್ಕಳು ನೋಂದಾಯಿಸಿದ್ದಾರೆ. ಈ ಪೈಕಿ 3.35 ಲಕ್ಷಕ್ಕೂ ಹೆಚ್ಚು ಗಂಡುಮಕ್ಕಳು, 3.78 ಲಕ್ಷಕ್ಕೂ ಹೆಚ್ಚು ಬಾಲಕಿಯರು ಮತ್ತು 5 ತೃತೀಯ ಲಿಂಗಿಗಳು ಇದ್ದಾರೆ.
ಪರೀಕ್ಷೆಯ ಮೊದಲ ದಿನವಾದ ಇಂದು ಪ್ರಥಮ ಭಾಷೆಯಾಗಿ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತ ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಲು ಪರೀಕ್ಷೆ ಬರೆಯಲಿದ್ದಾರೆ. ಕಳೆದ ಬಾರಿಯಂತೆ ಈ ಬಾರೀಯೂ ಸಿ.ಸಿ,ಕ್ಯಾಮೆರಾ, ವೆಬ್ ಕಾಸ್ಟಿಂಗ್ ಕಣ್ಣಾವಲಿನಲ್ಲಿ ಪರೀಕ್ಷೆಗಳು ನಡೆಯಲಿವೆ. ಏ.4ರವರೆಗೆ ನಡೆಯುವ ಪರೀಕ್ಷೆಗಳಿಗೆ ಸಕಲ ಸಿದ್ಧತೆ ಮಾಡಿ ಕೊಳ್ಳಲಾಗಿದೆ ಎಂದು ಶಾಲಾ ಪರೀಕ್ಷೆಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಎಲ್ಲೆಡೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ, ಮುಂಜಾಗ್ರತಾ ಕ್ರಮ ಹಾಗೂ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. 2,818 ಸ್ಥಾನಿಕ ದಳ, ಜಿಲ್ಲಾ ಹಂತದಲ್ಲಿ 400, ತಾಲೂಕು ಹಂತದಲ್ಲಿ 1,662 ವಿಚಕ್ಷಣ ದಳವನ್ನು ಪರೀಕ್ಷಾ ಭದ್ರತೆ ದೃಷ್ಟಿಯಿಂದ ನೇಮಿಸಲಾಗಿದೆ.
ಪರೀಕ್ಷಾ ಸಮಯದಲ್ಲಿ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸ ಲಾಗಿದೆ. ಜೆರಾಕ್ಸ್, ಸೈಬರ್, ಕಂಪ್ಯೂಟರ್ ಕೇಂದ್ರಗಳನ್ನು ತೆರೆಯುವಂತಿಲ್ಲ. ಪರೀಕ್ಷಾ ಕೇಂದ್ರಗಳ ಒಳಗೆ ಮೊಬೈಲ್ ಫೋನ್‌ಗಳು, ಸ್ಮಾರ್ಟ್‌ವಾಚ್‌ಗಳು ಮತ್ತು ಇಯರ್‌ಫೋನ್‌ಗಳಂತಹ ಎಲೆಕ್ಟ್ರಾನಿಕ್ ಸಾಧನಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಇದಿ…
C News TV Kannada News Online in cnewstv