ಶಿವಮೊಗ್ಗ : ಶಿವಮೊಗ್ಗದ ಭದ್ರಾವತಿಯಲ್ಲಿ ಪೊಲೀಸರ ಗುಂಡಿನ ಸದ್ದು ಮತ್ತೊಮ್ಮೆ ಮೊಳಗಿದ್ದು, ರೌಡಿಶೀಟರ್ ಕಾಲಿಗೆ ಗುಂಡೇಟು ನೀಡಿ ಬಂಧಿಸಲಾಗಿದೆ.
ಶಿವಮೊಗ್ಗದ ಕಡೇಕಲ್ ಅಬೀದ್ (32) ಬಂಧಿತ ಆರೋಪಿ.
ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದ ರೌಡಿ ಶೀಟರ್ ಕಡೇಕಲ್ ಅಬೀದ್ ಕಾಲಿಗೆ ಭದ್ರಾವತಿಯಲ್ಲಿ ಗುಂಡು ಹಾರಿಸಲಾಗಿದೆ. ಕೊಲೆ ಯತ್ನ ಪ್ರಕರಣದಲ್ಲಿ ರೌಡಿ ಶೀಟರ್ ಕಡೇಕಲ್ ಅಬೀದ್ ತಲೆ ಮರೆಸಿಕೊಂಡಿದ್ದ. ಕಳೆದ ಒಂದು ತಿಂಗಳಿನಿಂದ ಈತನಿಗಾಗಿ ಪೊಲೀಸರು ಶೋಧಿಸುತ್ತಿದ್ದರು. ಇಂದು ಖಚಿತ ಮಾಹಿತಿ ಹಿನ್ನೆಲೆ ಪೇಪರ್ ಟೌನ್ ಇನ್ಸ್‌ಪೆಕ್ಟರ್ ನಾಗಮ್ಮ ನೇತೃತ್ವದ ತಂಡ ಬಂಧಿಸಲು ತೆರಳಿತ್ತು. ಈ ಸಂದರ್ಭ ಕಡೇಕಲ್ ಅಬೀದ್ ಪೊಲೀಸ್ ಸಿಬ್ಬಂದಿ ಅರುಣ್ ಮೇಲೆ ದಾಳಿ ನಡೆಸಿದ್ದಾನೆ. ಈ ವೇಳೆ ಇನ್ಸ್‌ಪೆಕ್ಟರ್ ನಾಗಮ್ಮ, ಕಡೇಕಲ್ ಅಬೀದ್‌ನ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಅರುಣ್ ಕುಮಾರ್ ಮತ್ತು ಕಡೇಕಲ್ ಅಬೀದ್‌ನನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಕಡೇಕಲ್ ಅಬೀದ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ರಾಬರಿ, ಕೊಲೆ ಯತ್ನ ಸೇರಿ ಒಟ್ಟು 20 ಪ್ರಕರಣಗಳಿವೆ.
C News TV Kannada News Online in cnewstv