ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಹಣ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಗುರುವಾರ ಯಶಸ್ವಿಯಾಗಿ ನಡೆಯಿತು.
ದೇವಸ್ಥಾನದ ಜಾತ್ರೆ ಹಾಗೂ ಹುಣ್ಣಿಮೆಯಲ್ಲಿ ಭಕ್ತರ ಮೂಲಕ ಸಂಗ್ರಹವಾದ ಕಾಣಿಕೆ ಹಣದ ಎಣಿಕೆಯನ್ನು ಸೊರಬ ತಾಲೂಕು ದಂಡಾಧಿಕಾರಿ ಮಂಜುಳಾ ಹೆಗಡಾಳ್ ನೇತೃತ್ವದಲ್ಲಿ ನಡೆಸಲಾಯಿತು.
ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 18,18,480 ರೂ. ಕಾಣಿಕೆ ಸಂಗ್ರವಾಗಿದೆ. ಇನ್ನು ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಸಹ ಆಳವಡಿಸಲಾಗಿತ್ತು.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಸ್ಥಾನದ ಇ.ಒ ಜಿ.ಕೆ ಪ್ರಮೀಳಾ ಕುಮಾರಿ, ಶಿರಸ್ತೇದಾರ್ ಎಸ್.ನಿರ್ಮಲಾ, ನಾಡಕಚೇರಿ ಉಪ ತಹಸೀಲ್ದಾರ್ ಲಲಿತಾ, ತಾಲೂಕು ಪ್ರಭಾರ ರಾಜಸ್ವ ನಿರೀಕ್ಷಕ ವಿನೋದ್, ಮುಜುರಾಯಿ ಇಲಾಖೆ ವಿಷಯ ನಿರ್ವಾಹಕಿ ಎಂ.ಶೃತಿ, ಕೆನರಾ ಬ್ಯಾಂಕ್ ಶಾಖೆ ಸಹಾಯಕ ವ್ಯವಸ್ಥಾಪಕ ಸಂಜಯ್ ಕಾಟೆ, ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು, ದೇವಸ್ಥಾನದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
