ಶಿವಮೊಗ್ಗ : ಶಾಂತಿ ಮತ್ತು ಸೌಹಾರ್ದತೆ ಸಾರುವ ಪವಿತ್ರ ರಂಜಾನ್ ಹಬ್ಬವನ್ನ ಮುಸ್ಲಿಂ ಸಮೂದಾಯದವರು ಇಂದು ಶಿವಮೊಗ್ಗ ನಗರ ಸೇರಿದಂತೆ ರಾಜ್ಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ.
ಶಿವಮೊಗ್ಗ ಡಿಸಿ ಕಚೇರಿ ಸಮೀಪದ ಈದ್ಗಾ ಮೈದಾನ, ಗೋಪಾಳದ ದ್ರೌಪದಮ್ಮ ಸರ್ಕಲ್ ಬಳಿಯ ಮೈದಾನ ಸೇರಿದಂತೆ ಹಲವೆಡೆ ರಂಜಾನ್ ಹಿನ್ನೆಲೆ ಸಾವಿರಾರು ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು.
ಬೆಳಗ್ಗೆಯಿಂದಲೇ ಮುಸ್ಲಿಂ ಬಾಂಧವರು ಹೊಸಬಟ್ಟೆ ಉಟ್ಟು ಮಕ್ಕಳು ಸಹಿತ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮುಸ್ಲಿಂ ಧರ್ಮ ಗುರುಗಳು ರಂಜಾನ್ ಹಬ್ಬದ ಮಹತ್ವದ ಬಗ್ಗೆ ಉಪದೇಶ ನೀಡಿದರು. ಪ್ರಾರ್ಥನೆ ಬಳಿಕ ಮುಸ್ಲಿಂ ಬಾಂಧವರು, ಪರಸ್ಪರ ಅಪ್ಪಿಕೊಂಡು, ಶುಭಾಶಯ ವಿನಿಮಯ ಮಾಡಿಕೊಂಡರು.
ಇನ್ನು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯಿಂದ ವ್ಯಾಪಕ ಬಂದೋಬಸ್ತ್ ಸಹ ಮಾಡಲಾಗಿತ್ತು.
