ಶಿವಮೊಗ್ಗ : ಡಿಸಿ ಕಚೇರಿಯ ಎದುರಿನ ಖಾಲಿ ಜಾಗಕ್ಕೆ ಬೇಲಿ ಹಾಕಿ ವಾಹನಗಳ ಪಾರ್ಕಿಂಗ್ ಮತ್ತು ಸಾರ್ವಜನಿಕರ ಓಡಾಟ ನಿರ್ಬಂಧಿಸಿದ್ದನ್ನು ವಿರೋಧಿಸಿ, ಹಿಂದೂ ಸಂಘಟನೆಗಳ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

ಮುಖ್ಯವಾಗಿ ಖಾಲಿ ಜಾಗಕ್ಕೆ ಬೇಲಿ ಹಾಕಿರುವುದು ಹಿಂದೂ ಸಂಘಟನೆಯ ಆಕ್ರೋಶಕ್ಕೆ ಕಾರಣವಾಗಿದ್ದು, ಇದು ಸಾರ್ವಜನಿಕರ ಆಸ್ತಿಯೇ ವಿನಃ ಬೇರೆಯಾರದ್ದೂ ಆಸ್ತಿಯಲ್ಲ. ಈ ಬೇಲಿಯನ್ನ ಪೊಲೀಸರು ಕೂಡಲೇ ತೆಗೆಸಬೇಕು, ಇಲ್ಲವಾದಲ್ಲಿ ನಾವೇ ಬೇಲಿ ತೆಗೆಯುವುದಾಗಿ ಹಿಂದೂ ಸಂಘಟನೆಗಳ ಪ್ರಮುಖರು- ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಡಿವೈಎಸ್ಪಿ ಸಂಜೀವ್ ಕುಮಾರ್ ಹಾಗೂ ಜಯನಗರ ಠಾಣೆ ಪೊಲೀಸರ ಜೊತೆ ವಾಗ್ವಾದ ನಡೆಸಿದ ಹಿಂದೂ ಸಂಘಟನೆಯ ಪ್ರಮುಖರು, ಘೋಷಣೆ ಕೂಗಿದ್ರು. ಸಾರ್ವಜನಿಕ ಆಸ್ತಿಯನ್ನ ಕಬಳಿಸಲು ಮುಸ್ಲಿಂರಿಗೆ ಸಹಕರಿಸುತ್ತಿರುವ ಎಲ್ಲಾ ಅಧಿಕಾರಿಗಳಿಗೆ ದಿಕ್ಕಾರ ಎಂದು ಘೋಷಣೆ ಕೂಗಿದ್ರು. ಇನ್ನು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಆಗಮಿಸಿ, ಹಿಂದೂ ಸಂಘಟನೆಯ ಮುಖಂಡರ ಜೊತೆ ಮಾತುಕತೆ ನಡೆಸಿದರು. ಸಂಜೆ 7 ಗಂಟೆಯವರೆಗೆ ಸಮಯ ಕೊಡಿ, 7.15 ರ ವರೆಗೆ ತೆಗೆಸದಿದ್ದರೆ ನಾನೇ ತೆಗೆಸುವುದಾಗಿ ಭರವಸೆ ನೀಡಿದರು. ಎಸ್ಪಿ ಅವರ ಭರವಸೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆ ಪ್ರತಿಭಟನೆ ಹಿಂಪಡೆದಿದ್ದು, ಸದ್ಯ ವಾತಾವರಣ ತಿಳಿಗೊಂಡಿದೆ
C News TV Kannada News Online in cnewstv