Cnewstv | 08.04.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
DCC ಬ್ಯಾಂಕ್ ನಕಲಿ ಗೋಲ್ಡ್ ಹಗರಣ : ಶಿವಮೊಗ್ಗದಲ್ಲಿ ಇಡಿ ತಂಡದ ದಾಳಿ.
ಶಿವಮೊಗ್ಗ : ಇಂದು ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಡಿಸಿಸಿ ಬ್ಯಾಂಕ್ ನಕಲಿ ಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಗೋಪಾಲ ಗೌಡ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾರವರ ನಿವಾಸದ ಮೇಲೆ ದಾಳಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಶಿವಮೊಗ್ಗದ ಗಾಂಧಿ ಬಜಾರ್ ನಗರ ಶಾಖೆಯಲ್ಲಿ 2014ರ ಜೂನ್ ನಲ್ಲಿ ನಡೆದಿದ್ದ ನಕಲಿ ಗೋಲ್ಡ್ ಪ್ರಕರಣ ಸಂಬಂಧಿಸಿದಂತೆ, ಆ ವೇಳೆ ಶಾಖೆಯ ಮ್ಯಾನೇಜರ್ ಆಗಿದ್ದ ಶೋಭಾ ರವರ ನಿವಾಸ ಮೇಲೆ ಬೆಂಗಳೂರಿನಿಂದ ಮೂರು ಪ್ರತ್ಯೇಕ ವಾಹನಗಳಲ್ಲಿ ಆಗಮಿಸಿರುವ 8ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಇದಿ…