Breaking News

ಡಿಸಿಸಿ ಬ್ಯಾಂಕ್ ಹಗರಣ : ಆರ್.ಎಂ.ಮಂಜುನಾಥ್ ಗೌಡ 14 ದಿನ ಇ.ಡಿ ಕಸ್ಟಡಿಗೆ

ಬೆಂಗಳೂರು: 2014 ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನವನ್ನ ಅಡವಿಟ್ಟು 62.77 ಕೋಟಿ ರೂ. ಸಾಲ ನೀಡಿ, ಅಕ್ರಮ ಎಸಗಿದ್ದ ಪ್ರಕರಣದಲ್ಲಿ ಬ್ಯಾಂಕ್ ನ ಅಧ್ಯಕ್ಷ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಆರ್.ಎಂ. ಮಂಜುನಾಥ್ ಗೌಡ ಅವರನ್ನ ಇಡಿ ಅರೆಸ್ಟ್ ಮಾಡಿದೆ.
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ನಿನ್ನೆಯಿಂದಲೂ ತೀವ್ರ ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಇಂದು ಬಂಧಿಸಿ, ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ನಗರದ ಅಪೆಕ್ಸ್ ಬ್ಯಾಂಕ್ ನ ಅತಿಥಿ ಗೃಹದಲ್ಲಿದ್ದ ಮಂಜುನಾಥ್ ಗೌಡರ ವಿಚಾರಣೆ ಮುಗಿಸಿದ ಬಳಿಕ, ಅವರನ್ನ ಶಾಂತಿ ನಗರದ ಇಡಿ ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದರು. ಬಳಿಕ ಮೆಡಿಕಲ್ ಟೆಸ್ಟ್ ಮುಗಿಸಿ, ಬೆಂಗಳೂರಿನ 1ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಇಡಿ ಅಧಿಕಾರಿಗಳ ಮನವಿ ಮೇರೆಗೆ ಹೆಚ್ಚಿನ ವಿಚಾರಣೆಗೆ 14 ದಿನಗಳ ಕಾಲ ಕಸ್ಟಡಿಗೆ ನೀಡಿ ಆದೇಶಿಸಿದೆ.

Leave a Reply

Your email address will not be published. Required fields are marked *

*