ಶಿವಮೊಗ್ಗ: ಸಾಲಭಾಧೆಯಿಂದ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ಪಟ್ಟಣದಲ್ಲಿ ನಡೆದಿದೆ.
ಅಮೀರ್ ಅಹಮದ್(58) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಹೊಸನಗರ ಪಟ್ಟಣ ಸಮೀಪದ ಕನ್ನಾರುಗುಂಡಿ ಸೇತುವೆಯ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಖಾಸಗಿ ಹಾಗೂ ವಿವಿಧ ಹಣಕಾಸು ಸಂಘ- ಸಂಸ್ಥೆಗಳಲ್ಲಿ ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಸಾಲಭಾಧೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
C News TV Kannada News Online in cnewstv